Home News Kannur: ಅತ್ಯಾಚಾರ ಕೊಲೆ ಆರೋಪಿ ಜೈಲಿನಿಂದ ಪರಾರಿ! ಬಳಿಕ ಸೆರೆ

Kannur: ಅತ್ಯಾಚಾರ ಕೊಲೆ ಆರೋಪಿ ಜೈಲಿನಿಂದ ಪರಾರಿ! ಬಳಿಕ ಸೆರೆ

Hindu neighbor gifts plot of land

Hindu neighbour gifts land to Muslim journalist

Kannur : 2011ರಲ್ಲಿ ದೇಶದಲ್ಲಿ ಸುದ್ದಿ ಮಾಡಿದ್ದ ಕೇರಳದ ಸೌಮ್ಯಾ ಅತ್ಯಾಚಾರ ಕೊಲೆ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ, ಗೋಡೆ ಹಾರಿ ಪರಾರಿಯಾದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ. ಆದರೆ ಕೆಲವೇ ಗಂಟೆಗಳ ಬಳಿಕ ಆತ ಬಾವಿಯೊಂದರಲ್ಲಿ ಸಿಕ್ಕಿಬಿದ್ದಿದ್ದಾನೆ.

ಜೈಲು ಪರಾರಿ ಪ್ರಕರಣಗಳು ಸಾಮಾನ್ಯವಾದರೂ, ಈತನಿಗೆ ಎಡ ಮುಂಗೈ ಇಲ್ಲದ ಕಾರಣ, ಆತ ಹೇಗೆ ಪರಾರಿ ಆದ ಎಂಬುದು ಮಹತ್ವ ಪಡೆದುಕೊಂಡಿದೆ. ಜತೆಗೆ, ಆತನಿಗೆ ತಪ್ಪಿಸಿಕೊಳ್ಳಲು ಯಾರಾದರೂ ಸಹಾಯ ಮಾಡಿರಬಹುದೇ ಎಂಬ ಶಂಕೆಗೂ ಕಾರಣವಾಗಿದೆ.

ಸಿಸಿಟೀವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿಯಲ್ಲಿ, ಅಪರಾಧಿ ಗೋವಿಂದಚಾಮಿ ಬಟ್ಟೆಗಳನ್ನು ಒಟ್ಟಾಗಿ ಹೆಣೆದು, ಅದನ್ನು ಹಗ್ಗದಂತೆ ಬಳಸಿಕೊಂಡು ಗೋಡೆ ಹತ್ತಿ, ಬೆಳಗ್ಗೆ 4.15ರಿಂದ 6.30ರ ಅವಧಿಯಲ್ಲಿ ತಪ್ಪಿಸಿಕೊಂಡಿರುವುದು ಪತ್ತೆಯಾಗಿದೆ. ಈ ವಿಷಯವು ಕಣ್ಣೂರು ನಗರ ಪೊಲೀಸರಿಗೆ ಬೆಳಗ್ಗೆ 7 ಗಂಟೆಗೆ ತಿಳಿದಿದ್ದು, ಕೂಡಲೇ ಅವನ ಶೋಧಕ್ಕೆ ಇಳಿದಿದ್ದರು. ಟೀವಿಯಲ್ಲಿ ಸುದ್ದಿ ನೋಡಿದ್ದ ಕೆಲವರು ಗೋವಿಂದಚಾಮಿ ಸುಳಿದಾಟ ತಾವು ನೋಡಿದ್ದೇವೆ ಎಂದಿದ್ದರು.

ಆದರೆ ತಪ್ಪಿಸಿಕೊಂಡ ಕೆಲ ಗಂಟೆಗಳಲ್ಲೇ, ಗೋವಿಂದಚಾಮಿ ಥಲಪ್‌ ಎಂಬಲ್ಲಿನ ಪಾಳುಬಿದ್ದ ಬಾವಿಯೊಂದರಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಹಾಗೂ ಹಗ್ಗದ ಸಹಾಯದಿಂದ ಆತನ ಮೇಲೆತ್ತಲಾಗಿದೆ. 2011ರಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಸೌಮ್ಯ ಎಂಬಾಕೆಯನ್ನು ಮಂಜಕ್ಕಾಡ್‌ ಪ್ರದೇಶದಲ್ಲಿ ಅತ್ಯಾಚಾರ, ಮಾಡಿದ್ದ ಚಾಮಿ, ಬಳಿಕ ಆಕೆಯನ್ನು ಕೊಲೆ ಮಾಡಿದ್ದ.

ಇದನ್ನೂ ಓದಿ: Chikkamaglur : ಇನ್ಮುಂದೆ ಬೀದಿನಾಯಿಗಳಿಗೆ ರಸ್ತೆಯಲ್ಲಿ ಊಟ ಹಾಕಿದ್ರೆ ಬೀಳುತ್ತೆ ಕೇಸ್.!