ಸಿನಿಮಾ ಹಾಗೂ ಬ್ರಾಂಡ್ ಪ್ರಾಡಕ್ಟ್ಗಳ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಸೊಂಟಕ್ಕೆ ಬಲವಾದ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ಆರು ತಿಂಗಳು ಬ್ರೇಕ್ ತೆಗೆದುಕೊಳ್ಳಲೇ ಬೇಕು ಎನ್ನುವ ಪರಿಸ್ಥಿತಿ ಎದುರಾಗಿದೆ.
ಹೌದು, ಆಕ್ಷನ್ ಸಿನಿಮಾವೊಂದರ ಅದ್ದೂರಿ ಶೂಟಿಂಗ್ ವೇಳೆ ಆಯತಪ್ಪಿ ಬಿದ್ದಿರುವ ಕಾರಣ, ಅವರ ಸೊಂಟಕ್ಕೆ ಬಲವಾಗಿ ಪೆಟ್ಟು ಬಿದ್ದಿದ್ದೆ. ಹೀಗಾಗಿ ವೈದ್ಯರು ನ್ಯಾಶನಲ್ ಕ್ರಶ್ಗೆ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ
ಹಾಡೊಂದರ ಅದ್ದೂರಿ ಸೆಟ್ನಲ್ಲಿ ಡ್ಯಾನ್ಸ್ ಶೂಟಿಂಗ್ ನಡೆಯುತ್ತಿತ್ತು. ಕ್ಯಾಮೆರಾ ಮುಂದೆ ಭರ್ಜರಿಯಾಗಿ ಸ್ಟೆಪ್ ಹಾಕುತ್ತಿದ್ದ ರಶ್ಮಿಕಾ ಅವರು ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಅವರ ಸೊಂಟಕ್ಕೆ ಬಲವಾದ ಪೆಟ್ಟು ಬಿದ್ದ ಕಾರಣ, ಕೂಡಲೇ ಅವರನ್ನು ವೈದ್ಯರ ಬಳಿ ತಪಾಸಣೆ ಕರೆದೊಯ್ಯಲಾಯ್ತು. ತೀವ್ರವಾಗಿ ಪೆಟ್ಟು ಬಿದ್ದ ಪರಿಣಾಮ ಆರು ತಿಂಗಳು ರೆಸ್ಟ್ ಮಾಡುವ ಅವಶ್ಯಕತೆ ಇದೆ ಎನ್ನಲಾಗಿದೆ. ರಶ್ಮಿಕಾರ ಪೋಸ್ಟ್ಗಳಿಗೆ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದು, ಶೀಘ್ರವಾಗಿ ಗುಣಮುಖರಾಗಿ ಎಂದು ಹಾರೈಸುತ್ತಿದ್ದಾರೆ.
ರಶ್ಮಿಕಾ ಅವರು ನಾಲ್ಕು ದೊಡ್ಡ ಸಿನಿಮಾಗಳ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. 30 ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಬ್ರ್ಯಾಂಡ್‌ಗಳ ಶೂಟ್ಗೆ ಒಪ್ಪಿಗೆ ಕೊಟ್ಟಿದ್ದಾರೆ. ಅವರ ಬಿಡುವಿಲ್ಲದ ವೇಳೆಯ ಹೊರತಾಗಿಯೂ, ತಮ್ಮ ಶಕ್ತಿಯುತ ಅಭಿನಯ ಮತ್ತು ಸ್ಕ್ರೀನ್ ಪ್ರೆಸೆನ್ಸ್ ಮೂಲಕ ಅವರು ಪ್ರೇಕ್ಷಕರ ಅಚ್ಚುಮೆಚ್ಚಿನ ನಟಿಯಾಗಿದ್ದಾರೆ. ಸದ್ಯಕ್ಕೆ ಚೇತರಿಸಿಕೊಳ್ಳುವುದೇ ಅವರ ಪ್ರಮುಖ ಆದ್ಯತೆಯಾಗಿದೆ.



