ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರ್ಷಧಾರೆ ಹೆಚ್ಚುತ್ತಿದೆ. ಜುಲೈ 9 ರಿಂದ 11 ರವರೆಗೆ ಕರಾವಳಿಯಲ್ಲಿ, ಜುಲೈ 9 ರಂದು ದಕ್ಷಿಣ ಒಳನಾಡು ಭಾಗದಲ್ಲಿ ಮತ್ತು ಜುಲೈ 8 ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಪರೀತ ಮಳೆಯ ಜೊತೆಗೆ ಗಂಟೆಗೆ 50-60 ಕಿ.ಮೀ. ವೇಗದಲ್ಲಿ ಗಾಳಿ ಕೂಡಾ ಇರಲಿದೆ ಎಂದು ಇಲಾಖೆ ಎಚ್ಚರಿಸಿದೆ.
ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ಉಡುಪಿಗೆ ನಾಳೆ ರೆಡ್ ಅಲರ್ಟ್ ನೀಡಲಾಗಿದ್ದು, ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಮಳೆಯಬ್ಬರದ ನಿರೀಕ್ಷೆ ಇದೆ.
(50-60 Kmph) likely to occur at one or two places over & Heavy to Very Heavy rain with sustained wind (50-60 Kmph) likely to occur at a few places over Shivamogga district.
Heavy to very heavy rain with sustained wind (50-60 Kmph) likely to occur at one or two places over— Karnataka State Natural Disaster Monitoring Centre (@KarnatakaSNDMC) July 6, 2026



