ಸೋಮವಾರ, 26 ಅಕ್ಟೋಬರ್ 2026
Trending

Heavy Rain: ಚಿಕ್ಕಮಗಳೂರು ಜಿಲ್ಲೆಯಲ್ಲಿ ‌ರೆಡ್ ಅಲರ್ಟ್: ನಾಳೆ ಜು.31 ರಂದು 6 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

School Holiday
Advertisement

Heavy Rain: ಮಲೆನಾಡು ಭಾಗದಲ್ಲಿ ವಿಪರೀತ ಮ‌ಳೆ‌ ಹಿನ್ನೆಲೆಯಲ್ಲಿ ನಾಳೆ ಮಲೆನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಅಧಿಕ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜು ಸೇರಿದಂತೆ ನಾಳೆ, ಜೂಲೈ 31 ರಂದು ರಜೆ ಘೋಷಣೆ ಮಾಡಲಾಗಿದೆ.

Sponsored

ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ‌‌ ಘೋಷಣೆ ಮಾಡಲಾಗಿದೆ. ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ‌ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ನೀಡಿ ಆದೇಶಿಸಿದ್ದಾರೆ. ಆದರೆ ಪಕ್ಕದ ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇರುವುದಿಲ್ಲ.

Advertisement
Advertisement
Advertisement
div class="ere-sticky">