ಸೋಮವಾರ, 26 ಅಕ್ಟೋಬರ್ 2026
Trending

ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದಿನಿಂದ ಜೂ.10 ರವರೆಗೆ ರೆಡ್‌ ಅಲರ್ಟ್‌: ಭಾರೀ ಮಳೆಯ ಮುನ್ಸೂಚನೆ

weather forecast

ಮಂಗಳೂರು ಜೂ.8: ಕರಾವಳಿಯ ಕೆಲವು ಭಾಗಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ. ನೈರುತ್ಯ ಮುಂಗಾರು ಚುರುಕುಗೊಳ್ಳುವ ನಿರೀಕ್ಷೆ ಹೆಚ್ಚಾಗಿದ್ದು, ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಜೂ.10 ರವರೆಗೆ ʼರೆಡ್‌ ಅಲರ್ಟ್‌ʼ ಘೋಷಣೆ ಮಾಡಿದೆ.

Sponsored

ಭಾನುವಾರ ಪುತ್ತೂರು, ಸುಳ್ಯ, ಮೂಡುಬಿದಿರೆ, ಬಂಟ್ವಾಳ ಮತ್ತು ಬೆಳ್ತಂಗಡಿ ಸುತ್ತಮುತ್ತ ಸಾಧಾರಣ ಮಳೆಯಾಗಿದೆ. ಮಂಗಳೂರಿನಲ್ಲಿ ಮುಂಜಾನೆ ಮಳೆಯಾಗಿದ್ದು, ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಿದೆ.