

Red Alert: ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುತ್ತಿದ್ದು, ಮಂಗಳವಾರ (ನಾಳೆ ಜೂ.17) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳಿಗೆ ಜೂನ್ 17 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 18 ರಿಂದ ಕರ್ನಾಟಕದಾದ್ಯಂತ ಮಳೆ ಹೆಚ್ಚಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.













