Home News Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ ಆಂಡ್‌ ಗ್ಯಾಂಗ್‌ ಕೋರ್ಟ್‌ಗೆ ಹಾಜರು

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ ಆಂಡ್‌ ಗ್ಯಾಂಗ್‌ ಕೋರ್ಟ್‌ಗೆ ಹಾಜರು

Hindu neighbor gifts plot of land

Hindu neighbour gifts land to Muslim journalist

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್‌ ಆಂಡ್‌ ಗ್ಯಾಂಗ್‌ ಇಂದು 57ನೇ ಸಿಸಿಹೆಚ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ, ದರ್ಶನ್‌ ಕೋರ್ಟ್‌ಗೆ ಕಾರಿನಲ್ಲಿ ಬಂದು ನ್ಯಾಯಾಲಯದ ಒಳಗಡೆ ಹೋಗಿದ್ದಾರೆ.

ಕೋರ್ಟ್‌ಗೆ ಹೋಗುವ ಮೊದಲು ತಮ್ಮ ಆರ್.ಆರ್.‌ ನಗರದ ನಿವಾಸದ ಬಳಿ ಬಂದ ಅಭಿಮಾನಿಗಳನ್ನು ಭೇಟಿ ಮಾಡಿ ಅನಂತರ ತಮ್ಮ ಕಾರಿನಲ್ಲಿ ದರ್ಶನ್‌ ಕೋರ್ಟ್‌ಗೆ ಹೋಗಿದ್ದಾರೆ. 57 ನೇ ಸೆಷನ್ಸ್‌ ಕೋರ್ಟ್‌ನ ನ್ಯಾಯಧೀಶ ಜೈ ಶಂಕರ್‌ ಪೀಠದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ವಿಚಾರಣೆ ನಡೆಯಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡುವಾಗ ವಿಧಿಸಿದ್ದ ಷರತ್ತಿನ ಪ್ರಕಾರ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಷರತ್ತು ವಿಧಿಸಲಾಗಿತ್ತು. ಇಂದು ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗುತ್ತಿದ್ದಾರೆ. ಮತ್ತು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾರೆ.

ಆರೋಪಿಗಳ ಹಾಜರಾತಿ ಪಡೆದ ಕೋರ್ಟ್‌ ಏ.8 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಫೆ.25 ರಂದು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕಿದೆ ಎಂದು ಕೋರ್ಟ್‌ ಸೂಚನೆ ನೀಡಿತ್ತು. ಇದೀಗ ಕೊಲೆ ಆರೋಪಿಗಳಾಗಿರುವ ನಟ ದರ್ಶನ್‌, ಪವಿತ್ರಾ ಗೌಡ, ಪ್ರದೋಶ್‌, ವಿನಯ್‌, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಸೇರಿ 17 ಮಂದಿ ಆರೋಪಿಗಳು ಸಿಸಿಹೆಚ್‌ ಕೋರ್ಟ್‌ಗೆ ಹಾಜರಾಗಿದ್ದಾರೆ.