

Karnataka: ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ರಾಜ್ಯ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಎದ್ದು ಕಾಣುವ ಅಂಗವೈಕಲ್ಯ ಇರುವ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ನೀಡುವ ಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ಸರ್ಕಾರದ (karnataka) ಆದೇಶ ಹೊರಡಿಸಿದೆ.
ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (1)ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 121 ಸನನಿ 2020ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ‘ಡಿ’ ಯಿಂದ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಸಿ’ ಯಿಂದ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದು ಕಾಣುವ ಅಂವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4ರಷ್ಟು ಮೀಸಲಾತಿ ಆಸ್ಪದವನ್ನು ದಿನಾಂಕ:28/03/2023ರ ಆದೇಶದಲ್ಲಿನ ಎಲ್ಲಾ ಷರತ್ತು ಮತ್ತು ಉಪಬಂಧಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ಗ್ರೂಪ್ ‘ಸಿ’ ಯಿಂದ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಬಿ’ ಯಿಂದ ಗ್ರೂಪ್ ‘ಎ’ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೂ ಸಹ ವಿಸ್ತರಿಸಿ ಆದೇಶಿಸಿ ಅವಕಾಶ ಕಲ್ಪಿಸಲಾಗಿರುತ್ತದೆ.
ಇದನ್ನೂ ಓದಿ:India: ಕಾರ್ಖಾನೆಯಲ್ಲಿ ರೊಬೊ ಅಳವಡಿಕೆ: 6ನೇ ಸ್ಥಾನದಲ್ಲಿ ಭಾರತ













