Home latest BCCI : ಬಿಸಿಸಿಐನ 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ

BCCI : ಬಿಸಿಸಿಐನ 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ

Hindu neighbor gifts plot of land

Hindu neighbour gifts land to Muslim journalist

ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ 1983 ರ ವಿಶ್ವಕಪ್ ವಿಜೇತ ತಂಡದ ಹೀರೊ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) 36 ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ 67 ವರ್ಷದ ಬಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಯುವುದರಿಂದ ಪದಾಧಿಕಾರಿಗಳ ಆಯ್ಕೆ ಕೇವಲ ಔಪಚಾರಿಕವಾಗಿ ನಡೆದಿದೆ.

ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ ಅವರ ನೇಮಕವನ್ನು ಪ್ರಕಟಿಸಲಾಗಿದೆ. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಉತ್ತರಾಧಿಕಾರಿಯಾಗಿ ಬಿನ್ನಿ ಆಯ್ಕೆಯಾಗಿದ್ದಾರೆ.ಮಧ್ಯಮ ವೇಗಿ 1983 ರಲ್ಲಿ ಭಾರತದ ಐತಿಹಾಸಿಕ ವಿಶ್ವಕಪ್ ವಿಜಯದ ರೂವಾರಿಗಳಲ್ಲಿ ಒಬ್ಬರಾಗಿದ್ದು, ವಿಶ್ವಕಪ್ ನ ಎಂಟು ಪಂದ್ಯಗಳಲ್ಲಿ ಅವರು 18 ವಿಕೆಟ್‌ಗಳನ್ನು ಪಡೆದ ಹೆಮ್ಮೆಯ ಗರಿಯನ್ನು ಹೊಂದಿದ್ದವರು.

ಇದು ಪ್ರತಿಷ್ಠಿತ ಪಂದ್ಯಾವಳಿಯ 1983ರ ಆವೃತ್ತಿಯಲ್ಲಿ ಬೌಲರ್ ನ ಅತ್ಯುತ್ತಮ ಸಾಧನೆ ಕೂಡ ಆಗಿತ್ತು.ಪ್ರಸ್ತುತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿರುವ ಬಿನ್ನಿ ರಾಜ್ಯ ಸಂಸ್ಥೆಯಲ್ಲಿ ತಮ್ಮ ಸ್ಥಾನವನ್ನು ತೊರೆಯಲಿದ್ದಾರೆ