# ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ | 9 ಮಂದಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ಬಲೆಗೆ

- Link: https://hosakannada.com/news/rss-and-murder-news/
- Published: 2022-04-26T14:56:21+00:00
- Author: ಹೊಸಕನ್ನಡ ನ್ಯೂಸ್

ಕೇರಳದಲ್ಲಿ ನಡೆದ ಆರ್‌ಎಸ್‌ಎಸ್‌ ಕಾರ್ಯಕರ್ತ ಶ್ರೀನಿವಾಸನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ
9 ಮಂದಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

Sponsored

ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಏ.16 ರಂದು ಆರ್‌ಎಸ್‌ಎಸ್‌ ಕಾರ್ಯಕರ್ತ ಎಸ್.ಕೆ.ಶ್ರೀನಿವಾಸನ್‌
ಎಂಬಾತನ ಹತ್ಯೆಯಾಗಿತ್ತು. ಶ್ರೀನಿವಾಸನ್‌ ಹತ್ಯೆಗೆ ಎಸ್‌ಡಿಪಿಐ, ಪಿಎಫ್‌ಐನವರೇ ಕಾರಣ. ಈತನನ್ನು 
ಕೊಲ್ಲುವುದಾಗಿ ಈ ಹಿಂದೆ ಬೆದರಿಕೆ ಹಾಕಿದ್ದರು ಎಂದು ಶ್ರೀನಿವಾಸನ್‌ ಸ್ನೇಹಿತರು ಗಂಭೀರ ಆರೋಪ ಮಾಡಿದ್ದರು.

Advertisement

Advertisement

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು 9 ಮಂದಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿದ್ದು,
ವಿಚಾರಣೆಗೆ ಒಳಪಡಿಸಿದ್ದಾರೆ.

ಅಲಪ್ಪುಳದಲ್ಲಿ ಕಳೆದ ವರ್ಷ ಡಿಸೆಂಬರ್‌ನಲ್ಲಿ 24 ಗಂಟೆಗಳ ಅವಧಿಯಲ್ಲಿ ಎಸ್‌ಡಿಪಿಐ ಹಾಗೂ ಬಿಜೆಪಿ 
ನಾಯಕರ ಹತ್ಯೆ ನಡೆದಿತ್ತು. ಇದಕ್ಕೆ ಪ್ರತೀಕಾರವಾಗಿ ಆರ್‌ಎಸ್‌ಎಸ್‌ ಮುಖಂಡನ ಹತ್ಯೆ ನಡೆದಿದೆ ಎಂದು
ಆರೋಪಿಸಲಾಗಿತ್ತು.

Advertisement
