Home News UP: ಯೋಗಿ ಮಾತಿಗೂ ಕಿಮ್ಮತ್ತು ಕೊಡದ RSS ಮೂಲದ ಶಿಕ್ಷಣ ಸಂಸ್ಥೆ- ವಿದ್ಯಾರ್ಥಿನಿಯ ಶುಲ್ಕ ವಿನಾಯ್ತಿಗೆ...

UP: ಯೋಗಿ ಮಾತಿಗೂ ಕಿಮ್ಮತ್ತು ಕೊಡದ RSS ಮೂಲದ ಶಿಕ್ಷಣ ಸಂಸ್ಥೆ- ವಿದ್ಯಾರ್ಥಿನಿಯ ಶುಲ್ಕ ವಿನಾಯ್ತಿಗೆ ನಿರಾಕರಣೆ

Hindu neighbor gifts plot of land

Hindu neighbour gifts land to Muslim journalist

 

UP: ಹಿಂದೂ ಫೈರ್ ಬ್ರಾಂಡ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿರುವ ಯೋಗಿ ಮಾತಿಗೆ ಕಿಮ್ಮತ್ತು ಕೊಡದ ಆರ್ ಎಸ್ ಎಸ್ ಮೂಲದ ಶಿಕ್ಷಣ ಸಂಸ್ಥೆಯೊಂದು ವಿದ್ಯಾರ್ಥಿನಿಗೆ ಶುಲ್ಕ ವಿನಾಯಿತಿ ಕೊಡಲು ನಿರಾಕರಣೆ ಮಾಡಿದ ವಿಚಿತ್ರ ಪ್ರಕರಣ ಒಂದು ಬೆಳಕಿಗೆ ಬಂದಿದೆ.

 

ಹೌದು, ಐಎಎಸ್‌ ಅಧಿಕಾರಿ (IAS Officer) ಆಗಬೇಕೆಂಬ ಕನಸು ಹೊತ್ತ 7ನೇ ತರಗತಿ ಬಾಲಕಿಯೊಬ್ಬಳು ತನ್ನ ಕುಟುಂಬದ ಕಷ್ಟದಿಂದಾಗಿ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ್ದಳು. ನಂತರ ಬಾಲಕಿಯ ಕುಟುಂಬಸ್ಥರು ಆರ್ಥಿಕ ಸಹಾಯಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಅವರ ಮೊರೆ ಹೋದರು. ಆಗ ಯೋಗಿ ಮಗುವಿನ ಶಿಕ್ಷಣಕ್ಕೆ ಯಾವುದೇ ಅಡೆತಡೆ ಎದುರಾಗುವುದಿಲ್ಲ ಎಂದು ಭರವಸೆ ನೀಡಿ ಕಳುಹಿಸಿದ್ದರು. ಆದ್ರೆ ಬಾಲಕಿ ಶಾಲೆಗೆ ಹೋದಾಗ ನಡೆದಿದ್ದೇ ಬೇರೆ. ಶಾಲಾ ಆಡಳಿತ ಮಂಡಳಿ ಆ ವಿದ್ಯಾರ್ಥಿನಿಯ ಶುಲ್ಕವನ್ನ ಯಾವುದೇ ಕಾರಣಕ್ಕೂ ಮನ್ನಾ ಮಾಡೋದಿಲ್ಲ ಎಂದು ನಿರಾಕರಿಸಿದೆ.

 

ಈ ವಿಷಯ ಈಗ ಉತ್ತರ ಪ್ರದೇಶದಲ್ಲಿ (Uttar Pradesh) ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇದೇ ವಿಷಯವನ್ನ ಅಸ್ತ್ರವಾಗಿ ಬಳಸಿಕೊಂಡಿರುವ ಪ್ರತಿ ಪಕ್ಷಗಳು ಸಿಎಂ ಯೋಗಿ ಅವರ ಮಾತಿಗೂ ಕಿಮ್ಮತ್ತಿಲ್ಲದಂತಾಯ್ತಾ ಎಂಬ ಪ್ರಶ್ನೆ ಎತ್ತಿವೆ.

 

ಇದೀಗ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ತೀವ್ರವಾಗಿ ಖಂಡಿಸಿದ್ದು, ಅಲ್ಲದೇ ಮಗುವಿನ ಶಿಕ್ಷಣಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಆದ್ರೆ ಬಾಲಕಿ ಕುಟುಂಬ ಮುಖ್ಯಮಂತ್ರಿಗಳು ನಮಗೆ ಸಹಾಯ ಮಾಡುತ್ತಾರೆಂಬ ನಂಬಿಕೆಯಿದೆ ಎಂದು ಹೇಳಿದೆ.