Home News B.K. Hariprasad on RSS: ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌: ಬಿ.ಕೆ.ಹರಿಪ್ರಸಾದ್‌

B.K. Hariprasad on RSS: ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌: ಬಿ.ಕೆ.ಹರಿಪ್ರಸಾದ್‌

Mangaluru
Image Credit: Star of Mysore

Hindu neighbor gifts plot of land

Hindu neighbour gifts land to Muslim journalist

B K Hariprasad: ರಾಜ್ಯದಲ್ಲಿ ಆರ್‌ಎಸ್‌ಎಸ್‌ ಸಂಘಟನೆಯ ಶಾಖೆ ಚಟುವಟಿಕೆಗಳ ಕುರಿತು ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ನಡೆಸುವ ಮೊದಲು ಸರಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂದು ಅವರು ಹೇಳಿದ್ದಾರೆ.

ಆರ್‌ಎಸ್‌ಎಸ್ ಸಂಘಟನೆ ಕರ್ನಾಟಕ ರಾಜ್ಯದಾದ್ಯಂತ ನಿರಂತರವಾಗಿ ಶಾಖೆಗಳನ್ನು ನಡೆಸುತ್ತಿದೆ. ಆದರೆ ಈ ಕಾರ್ಯಕ್ರಮಗಳಿಗೆ ಯಾವುದೇ ಅಧಿಕೃತ ಅನುಮತಿ ಪಡೆಯದೆ ಸರ್ಕಾರಿ ಜಾಗಗಳನ್ನು ಬಳಸುತ್ತಿರುವುದು ಕಾನೂನು ಉಲ್ಲಂಘನೆ ಎಂದು ಅವರು ಆರೋಪಿಸಿದ್ದಾರೆ.

ಆರ್‌ಎಸ್‌ಎಸ್ ಅವರು ಭಾರತ ದೇಶದ ತಾಲಿಬಾನಿಗಳು. ಅವರು ಸರಕಾರದಲ್ಲಿ ನೋಂದಾಯಿಸದ ಸಂಘಟನೆ. ನಾವು ಇಷ್ಟೆಲ್ಲ ಹೇಳುತ್ತಿದ್ದೇವೆ — ಅವರು ತಮ್ಮ ಸಂಸ್ಥೆ ರಿಜಿಸ್ಟರ್ ಆಗಿರುವುದನ್ನು ತೋರಿಸಲಿ. ನೋಂದಣಿ ಇಲ್ಲದೆ ಇಷ್ಟು ವರ್ಷಗಳಿಂದ ಸರ್ಕಾರಿ ಜಾಗಗಳಲ್ಲಿ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:Karnataka: ಅಕ್ರಮ-ಸಕ್ರಮ : ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುವ ರೈತರಿಗೆ ಮಹತ್ವ ಮಾಹಿತಿ

ಅವರು ಮುಂದುವರಿಸಿ, ಪ್ಯಾಲೇಸ್ತೀನ್ ಪರವಾಗಿ ಪ್ರತಿಭಟನೆ ಮಾಡಿದರೆ ಪೊಲೀಸರಿಂದ ತಕ್ಷಣ ಬಂಧನವಾಗುತ್ತದೆ. ಆದರೆ ಆರ್‌ಎಸ್‌ಎಸ್ ಶಾಖೆಗಳನ್ನು ಸರ್ಕಾರಿ ಮೈದಾನಗಳಲ್ಲಿ ನಡೆಸಲು ಪೊಲೀಸರು ಅನುಮತಿ ನೀಡುತ್ತಾರೆ. ಇದೇಕೆ ಎಂಬುದನ್ನು ನಾನು ಪ್ರಶ್ನಿಸುತ್ತಿದ್ದೇನೆ ಎಂದು ಹೇಳಿದರು.