Home News Coin: ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ

Coin: ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ

Hindu neighbor gifts plot of land

Hindu neighbour gifts land to Muslim journalist

Coin: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೂರು ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆ ದೆಹಲಿಯ ಡಾ.ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಶತಮಾನೋತ್ಸವ (Centenary Ceremony) ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಹಾಗೂ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು.

ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನರೇಂದ್ರ ಮೋದಿ ಮಾತನಾಡಿದ ಅವರು, “ಈ 100 ರೂ. ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವಿದೆ ಮತ್ತು ಇನ್ನೊಂದು ಬದಿಯಲ್ಲಿ, ‘ವರದ ಮುದ್ರೆ’ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ. ಸ್ವಯಂಸೇವಕರು ಅವಳ ಮುಂದೆ ಸಮರ್ಪಣೆಯಿಂದ ನಮಸ್ಕರಿಸುತ್ತಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಮ್ಮ ಕರೆನ್ಸಿಯಲ್ಲಿ ತೋರಿಸಲಾಗಿದೆ. ಇಂದು ಬಿಡುಗಡೆಯಾದ ವಿಶೇಷ ಅಂಚೆ ಚೀಟಿಯೂ ಸಹ ಅದರ ಪ್ರಾಮುಖ್ಯತೆಯನ್ನು ಹೊಂದಿದೆ” ಎಂದರು.

ಇದನ್ನೂ ಓದಿ:DA, DR: ನೌಕರರು, ಪಿಂಚಣಿದಾರರಿಗೆ ದೀಪಾವಳಿ ಬಿಗ್‌ ಗಿಫ್ಟ್ – ಶೇ. 3 ರಷ್ಟು DA, DR ಹೆಚ್ಚಳಕ್ಕೆ ಸರ್ಕಾರ’ ಗ್ರೀನ್‌ ಸಿಗ್ನಲ್‌.!