Home News S Suresh Kumar: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸುರೇಶ್ ಕುಮಾರ್: ಮಾಧ್ಯಮ ಪ್ರಕಟಣೆ ಇಲ್ಲಿದೆ

S Suresh Kumar: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸುರೇಶ್ ಕುಮಾರ್: ಮಾಧ್ಯಮ ಪ್ರಕಟಣೆ ಇಲ್ಲಿದೆ

Hindu neighbor gifts plot of land

Hindu neighbour gifts land to Muslim journalist

S Suresh Kumar: ರೂಪಾಂತರಿ ಚಿಕುನ್‌ ಗೂನ್ಯಾದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್‌ ಆಗಿದ್ದಾರೆ. ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸುರೇಶ್‌ ಅವರು ನಾನು ಆರೋಗ್ಯವಾಗಿದ್ದು, ಯಾರೂ ಆತಂಕ ಪಡಬೇಡಿ. ವೈದ್ಯರ ಸಲಹೆಯ ಮೇರೆ ವಿಶ್ರಾಂತಿಯಲ್ಲಿದ್ದೇನೆ ಎಂದು ಹೇಳಿದ್ದಾರೆ.

ಕೆಲ ದಿನಗಳಿಂದ ಚಿಕೂನ್‌ ಗೂನ್ಯ ಬಾಧಿಸಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

ನಿನ್ನೆ (ಸೆ.03) ಶೇಷಾದ್ರಿಪುರಂ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಎಸ್‌.ಸುರೇಶ್‌ ಕುಮಾರ್‌ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗಿತ್ತು. ಇದೀಗ ಸುರೇಶ್‌ ಅವರು ಗುಣಮುಖರಾಗಿದ್ದು, ವಿಶ್ರಾಂತಿಯಲ್ಲಿದ್ದಾರೆ.