ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು, ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಆಚರಿಸಲಿದ್ದು, ಕಾಲೇಜಿನ ಪ್ರಥಮ ಪದವೀಧರರ ಸಮಾರಂಭವು 2026ರ ಸೆಪ್ಟೆಂಬರ್ 11ರಂದು ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಲಿದೆ.
Sponsoredಸ್ವಾಯತ್ತ ವ್ಯವಸ್ಥೆಯಡಿ ಪದವಿ ಪಡೆಯುತ್ತಿರುವ ಪ್ರಥಮ ಸ್ನಾತಕೋತ್ತರ ವಿದ್ಯಾರ್ಥಿಗಳ ತಂಡವನ್ನು ಅಧಿಕೃತವಾಗಿ ಗೌರವಿಸುವ ಮೂಲಕ ಈ ಸಮಾರಂಭವು ಸಂಸ್ಥೆಯ ಶೈಕ್ಷಣಿಕ ಪಯಣದಲ್ಲಿ ಹೊಸ ಅಧ್ಯಾಯವೊಂದಕ್ಕೆ ನಾಂದಿ ಹಾಡಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಹಾಗೂ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್, ಮಂಗಳೂರು ಇದರ ಅಧ್ಯಕ್ಷರಾದ ಅತಿ ವಂದನೀಯ ಡಾI ಪೀಟರ್ ಪಾಲ್ ಸಲ್ದಾನ್ಹಾ ಅವರು ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಿಭಾಗದ ಜಂಟಿ ನಿರ್ದೇಶಕರಾದ ಪ್ರೊ. ಕವಿತಾ ಕೆ. ಆರ್.; ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್, ಮಂಗಳೂರು ಇದರ ಕಾರ್ಯದರ್ಶಿಗಳಾದ ವಂದನೀಯ ಡಾI ಪ್ರವೀಣ್ ಲಿಯೋ ಲಸ್ರಾದೋ ಹಾಗೂ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಇದರ ಸಂಚಾಲಕರಾದ ಅತಿ ವಂದನೀಯ ಡಾI ಜೆ. ಬಿ. ಸಲ್ದಾನ್ಹಾ ಅವರು ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು.
ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ/ ಆಂಟನಿ ಪ್ರಕಾಶ್ ಮೊಂತೆರೊ, ಕಾಲೇಜಿನ ಉಪಪ್ರಾಂಶುಪಾಲರಾದ ಡಾI ವಿಜಯಕುಮಾರ್ ಮೊಳೆಯರ್, ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಡಾ/ ವಿನಯಚಂದ್ರ ಶೈಕ್ಷಣಿಕ ವಿಭಾಗದ ರಿಜಿಸ್ಟ್ರಾರ್ ಡಾI ನಾರ್ಬರ್ಟ್ ಮಸ್ಕರೇನ್ಹಸ್, ಪುತ್ತೂರು ಮಾಯಿ ದೆ ದೇವುಸ್ ಚರ್ಚ್ ಪಾಲನಾ ಪರಿಷತ್ತಿನ ಉಪಾಧ್ಯಕ್ಷರಾದ ಶ್ರೀ ರೋಶನ್ ಲಸ್ರಾದೋ, ಹಾಗೂ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಡಾI ಭಾರತಿ ಎಸ್. ರೈ ಉಪಸ್ಥಿತರಿದ್ದರು.




