ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಪರಿಣಾಮ ಸಕಲೇಶಪುರದ ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ರೈಲಿನಲ್ಲಿ ಕಾನ್ಸ್‌ಟೇಬಲ್ ಪರೀಕ್ಷೆಗೆ ತೆರಳುತ್ತಿದ್ದ ಪರೀಕ್ಷಾರ್ಥಿಗಳು ಪರದಾಡುತ್ತಿದ್ದಾರೆ.
ಸಕಲೇಶಪುರದ ಯಡಕುಮಾರಿ – ಶಿರವಾಗಿಲು ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಎಲ್ಲಾ ರೈಲುಗಳ ಸಂಚಾರ ಬಂದ್ ಮಾಡಲಾಗಿದೆ. ಸುಬ್ರಮಣ್ಯ ರೈಲ್ವೆ ನಿಲ್ದಾಣದಲ್ಲಿ ರೈಲುಗಳನ್ನು ನಿಲ್ಲಿಸಲಾಗಿದೆ. ಘಟನಾ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.
ರೈಲಿನಲ್ಲಿದ್ದ ಪರೀಕ್ಷಾರ್ಥಿಗಳು ಹಾಗೂ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಹಣ ಹಿಂದಿರುಗಿಸಿ ಬಸ್ ವ್ಯವಸ್ಥೆ ಕಲ್ಪಿಸುತ್ತಿದೆ. ರೈಲು ಬಂದ್‌ನಿಂದ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿದೆ.




