ಸೋಮವಾರ, 26 ಅಕ್ಟೋಬರ್ 2026
Trending

ವಿಧಾನ ಪರಿಷತ್‌ಗೆ ಸಲೀಂ ಅಹ್ಮದ್ ಹೊಸ ಸಾರಥಿ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆಯಾಗಿದ್ದಾರೆ. ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವರು 38 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಅವರ ವಿರುದ್ಧ 30 ಮತಗಳು ಚಲಾವಣೆಯಾಗಿವೆ.

Sponsored

ಸಭಾಪತಿ ಆಯ್ಕೆ ಪ್ರಕ್ರಿಯೆ ವೇಳೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಸಭಾಪತಿ ಆಯ್ಕೆಗೆ ಚುನಾವಣೆ ನಡೆಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದರು. ಈ ನಡುವೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಲೀಂ ಅಹ್ಮದ್ ಅವರನ್ನು ನೂತನ ಸಭಾಪತಿಯಾಗಿ ಘೋಷಿಸಲಾಯಿತು.

ಇದಕ್ಕೂ ಮುನ್ನ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಎಸ್. ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಉಭಯ ಸದನಗಳ ಅಧ್ಯಕ್ಷ ಸ್ಥಾನಕ್ಕೆ ಹೊಸ ನೇಮಕಾತಿ ಪೂರ್ಣಗೊಂಡಂತಾಗಿದೆ