Home News ಸಂಕ್ರಾಂತಿಯೊಳಗೆ ದೇಶದಲ್ಲಿ ಮತ್ತೊಂದು ಮಹಾ ದುರಂತ !!? | ಕೋಡಿಮಠದ ಶ್ರೀಗಳಿಂದ ಭವಿಷ್ಯವಾಣಿ

ಸಂಕ್ರಾಂತಿಯೊಳಗೆ ದೇಶದಲ್ಲಿ ಮತ್ತೊಂದು ಮಹಾ ದುರಂತ !!? | ಕೋಡಿಮಠದ ಶ್ರೀಗಳಿಂದ ಭವಿಷ್ಯವಾಣಿ

Hindu neighbor gifts plot of land

Hindu neighbour gifts land to Muslim journalist

ಕೋಡಿಮಠದ ಸ್ವಾಮೀಜಿ ಮತ್ತೊಂದು ಬಾರಿ ಆಘಾತಕಾರಿ ಭವಿಷ್ಯವನ್ನು ನುಡಿದಿದ್ದಾರೆ. ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದ್ದು, ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ರಾಣೆಬೆನ್ನೂರು ನಗರಕ್ಕೆ ಶುಕ್ರವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ನಾನು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ. ಅದರಂತೆ ಭಾರತೀಯ ಸೇನೆಯ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ ಪ್ರಕರಣ ನಡೆದು ಹೋಯಿತು. ಇದೀಗ ಮತ್ತೆ ಅಂಥದ್ದೇ ದುರಂತ ಸಂಭವಿಸುವ ಲಕ್ಷಣವಿದೆ ಎಂದರು.

ಕೊರೋನಾ ರೂಪಾಂತರಿ ಹೆಚ್ಚಾಗುವ ಎಲ್ಲ ಲಕ್ಷಣಗಳಿವೆ. ವಿಶ್ವದಲ್ಲೆಡೆ ರೋಗ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ದೇಶದಲ್ಲಿ ಸಂಶಯ, ಅಸಹನೆ, ದ್ವೇಷ ಹಾಗೂ ರಾಜಕೀಯ ಕಲಹಗಳು ಹೆಚ್ಚಾಗಲಿವೆ. ಕೆಲವೇ ದಿನಗಳಲ್ಲಿ ಮಳೆ ಕೂಡ ಅಧಿಕವಾಗಿ ಸುರಿಯುವ ಲಕ್ಷಣವಿದೆ ಎಂದು ತಿಳಿಸಿದರು.

ಅವರು ಹೇಳಿರುವ ಪ್ರತಿ ಭವಿಷ್ಯವು ಸತ್ಯವಾಗಿದ್ದು, ಈಗ ನುಡಿದಿರುವ ಭವಿಷ್ಯವು ಕೂಡ ಸತ್ಯವಾಗಲಿದೆಯೇ ಎಂಬುದನ್ನು ಕಾದುನೋಡಬೇಕಾಗಿದೆ.