ಶನಿವಾರ, 24 ಅಕ್ಟೋಬರ್ 2026

ಒಂದು ಡೈರಿ… ED ದಾಳಿ… ಜಾರಕಿಹೊಳಿ ಕೇಸ್‌ನಲ್ಲಿ ಮುಂದೇನಾಗಲಿದೆ?

Satish Jarakiholi

ಬೆಂಗಳೂರು: ಅಬಕಾರಿ ಪರವಾನಗಿ ಅಕ್ರಮಕ್ಕೆ ಸಂಬಂಧಿಸಿದ ತನಿಖೆ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಸತೀಶ್ ಜಾರಕಿಹೊಳಿ ಅವರ ಬಾಮೈದ ಮಂಜುನಾಥ್ ಅವರ ಹೆಸರು ಕೇಳಿಬಂದಿದ್ದು, ಅಬಕಾರಿ ಪರವಾನಗಿಗಳನ್ನು ಸಂಬಂಧಿಕರು ಹಾಗೂ ಆಪ್ತರ ಹೆಸರಿನಲ್ಲಿ ಪಡೆಯಲಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಯುತ್ತಿದೆ.

ಪ್ರಕರಣದ ತನಿಖೆ ವೇಳೆ ಮಂಜುನಾಥ್ ಅವರ ನಿವಾಸದಲ್ಲಿ ಪತ್ತೆಯಾದ ಡೈರಿ ಇದೀಗ ಪ್ರಮುಖ ಸುಳಿವಾಗಿ ಪರಿಣಮಿಸಿದೆ ಎನ್ನಲಾಗಿದೆ. ಡೈರಿಯಲ್ಲಿನ ಮಾಹಿತಿಯನ್ನು ಆಧರಿಸಿ ಅಧಿಕಾರಿಗಳು ಹಲವು ವಿಚಾರಗಳನ್ನು ಪರಿಶೀಲಿಸುತ್ತಿದ್ದು, ಅದರಲ್ಲಿರುವ ವಿವರಗಳು ಯಾರ ಪಾತ್ರದತ್ತ ಬೊಟ್ಟು ಮಾಡುತ್ತವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಇದೀಗ ED ದಾಳಿಯ ಬೆನ್ನಲ್ಲೇ ಪ್ರಕರಣ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ತನಿಖೆಯಲ್ಲಿ ಇನ್ನೇನು ಮಾಹಿತಿ ಹೊರಬರಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ