Home News Satish Jarakiholi: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುವುದು ಪಕ್ಕಾ – ಸಂಚಲನಕಾರಿ ಹೇಳಿಕೆ ನೀಡಿದ...

Satish Jarakiholi: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುವುದು ಪಕ್ಕಾ – ಸಂಚಲನಕಾರಿ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ !!

Hindu neighbor gifts plot of land

Hindu neighbour gifts land to Muslim journalist

Satish Jarakiholi : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ವಿವಾದ ಕೊಂಚಮಟ್ಟಿಗೆ ತಣ್ಣಗಾದಂತೆ ಕಾಣುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಒಟ್ಟೊಟ್ಟಿಗೆ ತಿಂಡಿ, ಊಟ ಮಾಡುವುದರ ಮುಖಾಂತರ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸುತ್ತಾ ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ ಎಂಬುದನ್ನು ತೋರ್ಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಎಂ ಪರಮಾಪ್ತ ಸತೀಶ್ ಜಾರಕಿಹೊಳಿ ಅವರು ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವುದು ಪಕ್ಕ ಎಂಬ ಹೇಳಿಕೆಯನ್ನು ನೀಡಿ ಸಂಚಲನ ಸೃಷ್ಟಿಸಿದ್ದಾರೆ.

ಇತ್ತೀಚಿಗಷ್ಟೇ ಶಾಸಕ ಬೇಳೂರು ಗೋಪಾಲಕೃಷ್ಣ ಅವರೊಂದಿಗೆ ಮಾತನಾಡುವಾಗ ಸಿದ್ದರಾಮಯ್ಯ ಅವರು “ರಾಜಕೀಯ ಶಾಶ್ವತ ಅಲ್ಲ, ಅದು ನಮ್ಮಪ್ಪನ ಮನೆಯ ಆಸ್ತಿಯೂ ಅಲ್ಲ” ಎಂಬ ಹೇಳಿಕೆಯನ್ನು ನೀಡಿ ಪರೋಕ್ಷವಾಗಿ ಸಿಎಂ ಸ್ಥಾನವನ್ನು ತ್ಯಾಗ ಮಾಡುವ ಬಗ್ಗೆ ಮಾತನಾಡಿದರು ಈ ಕುರಿತಾದ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಸಿ.ಎಂ. ಸಿದ್ದರಾಮಯ್ಯ ಅವರ ಅಧಿಕಾರ ತ್ಯಾಗದ ಮಾತುಗಳನ್ನು ಸಚಿವ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳಿರುವುದು ಸತ್ಯ. ರಾಜಕೀಯದಲ್ಲಿ ಯಾರಿಗೂ ಕೂಡ ಅಧಿಕಾರ ಶಾಶ್ವತವಲ್ಲ ಎಂದು ಹೇಳಿದ್ದಾರೆ.

ಅಲ್ಲದೆ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ತಮ್ಮ ರೀತಿಯಲ್ಲಿ ವ್ಯಾಖ್ಯಾನಿಸಿದ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರು ಈಗಾಗಲೇ ಅಧಿಕಾರ ತೊರೆಯಲು ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದಲ್ಲ, ಈಗಲಾದ್ರೂ ಬಿಡಬಹುದು ಅಥವಾ ಮೂವತ್ತು ತಿಂಗಳ ನಂತರವಾದರೂ ಬಿಡಬಹುದು, ಇಲ್ಲವೇ ಅದಕ್ಕೂ ಮೊದಲೇ ಬಿಡಬಹುದು. ಆದ್ರೆ ಒಂದಲ್ಲ ಒಂದು ದಿನ
ಬಿಡುವುದಂತೂ ಪಕ್ಕಾ.. ಅದು ಯಾವಾಗಲಾದ್ರೂ ಬಿಡಲೇಬೇಕು’ ಎಂದು ಹೇಳಿದ್ದಾರೆ.