

ರಿಯಾದ್: ಸೌದಿ ಅರೇಬಿಯಾದಿಂದ 56,000 ಪಾಕಿಸ್ತಾನ ಮೂಲದ ಭಿಕ್ಷುಕರನ್ನು ಗಡೀಪಾರು ಮಾಡಲಾಗಿದ್ದು, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೂಡ ರವಾನಿಸಲಾಗಿದೆ. ವಿದೇಶಗಳಲ್ಲಿ ಸಂಘಟಿತ ಭಿಕ್ಷಾಟನೆ ಮತ್ತು ಅಪರಾಧ ಚಟುವಟಿಕೆಗಳ ಬಗ್ಗೆ ಹೆಚ್ಚುತ್ತಿರುವ ಕಳವಳ ನಡುವೆ ಸೌದಿ ಅರೇಬಿಯಾ ಮತ್ತು ಯುಎಇ ಆಡಳಿತ ಪಾಕಿಸ್ತಾನಿ ಪ್ರಜೆಗಳ ಮೇಲೆ ತಪಾಸಣೆಯನ್ನು ಬಿಗಿಗೊಳಿಸಿವೆ. ಈ ಪ್ರವೃತ್ತಿಯು ದೇಶದ ಅಂತಾರಾಷ್ಟ್ರೀಯ ಪ್ರತಿಷ್ಠೆಗೆ ಹಾನಿ ಮಾಡುತ್ತಿದೆ ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಯುಎಇ ಹೆಚ್ಚಿನ ಪಾಕಿಸ್ತಾನಿ ನಾಗರಿಕರ ಮೇಲೆ ವಿನಾ ನಿರ್ಬಂಧಗಳನ್ನು ವಿಧಿಸಿದೆ. ಕೆಲವರು ದೇಶಕ್ಕೆ ಬಂದ ನಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತವಾಗಿದೆ.
“2025 ರಲ್ಲಿ, ಸಂಘಟಿತ ಭಿಕ್ಷಾಟನೆ ಸಿಂಡಿಕೇಟ್‌ಗಳನ್ನು ನಾಶಮಾಡಲು ಮತ್ತು ಅಕ್ರಮ ವಲಸೆಯನ್ನು ತಡೆಯುವ ಪ್ರಯತ್ನದಲ್ಲಿ ಅಧಿಕಾರಿಗಳು ವಿಮಾನ ನಿಲ್ದಾಣಗಳಲ್ಲಿ 66, 154 ಪ್ರಯಾಣಿಕರನ್ನು ತಡೆದಿದ್ದಾರೆ. ಈ ಜಾಲಗಳು ಪಾಕಿಸ್ತಾನದ ಪ್ರತಿಷ್ಠೆಗೆ ಹಾನಿ ಉಂಟುಮಾಡುತ್ತಿವೆ,” ಎಂದು ಪಾಕಿಸ್ತಾನ ಫೆಡರಲ್ ತನಿಖಾ ಸಂಸ್ಥೆ ಮಹಾನಿರ್ದೇಶಕ ರಿಫತ್ ಮುಖರ್ ಹೇಳಿದ್ದಾರೆ.
ಸೌದಿ ಅರೇಬಿಯಾ ಈ ವರ್ಷ ಭಿಕ್ಷಾಟನೆ ಆರೋಪದ ಮೇಲೆ 24,000 ಪಾಕಿಸ್ತಾನಿಗಳನ್ನು ಗಡೀಪಾರು ಮಾಡಿದೆ. ದುಬೈ ಸುಮಾರು 6,000 ವ್ಯಕ್ತಿಗಳನ್ನು ವಾಪಸ್ ಕಳುಹಿಸಿದರೆ, ಅಜರ್ಬೈಜಾನ್ ಸುಮಾರು 2,500 ಪಾಕಿಸ್ತಾನಿ ಭಿಕ್ಷುಕರನ್ನು ಗಡೀಪಾರು ಮಾಡಿದೆ.













