ಸೋಮವಾರ, 26 ಅಕ್ಟೋಬರ್ 2026
Trending

ಸವಣೂರು : ಉಚಿತ ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷಾ ಶಿಬಿರ

ಸವಣೂರು : ರೋಟರಿ ಕ್ಲಬ್ ಪುತ್ತೂರು ಸ್ವರ್ಣ, ಸವಣೂರು ಗ್ರಾಮ ಪಂಚಾಯತ್ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸವಣೂರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷಾ ಶಿಬಿರ ಸೆ. 29ರ ಬುಧವಾರ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆಯಿತು.

Sponsored

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಅವರು ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ವಹಿಸಿದ್ದರು.
ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು,ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಶೆಟ್ಟಿ ಕೆಡೆಂಜಿ,ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಸವಣೂರು ಸಿಎ ಬ್ಯಾಂಕ್ ಉಪಾಧ್ಯಕ್ಷ ತಾರಾನಾಥ ಕಾಯರ್ಗ,ಸವಣೂರು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ರವಿ ಕೆ.,ಆರೋಗ್ಯ ಸಹಾಯಕಿ ವಾಗೇಶ್ವರಿ,ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಕಾರ್ಯದರ್ಶಿ ಆನಂದ ಮೂವಪ್ಪು,ಸೆನೋರಿಟಾ ಆನಂದ್ ಉಪಸ್ಥಿತರಿದ್ದರು.

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಓ ಚಂದ್ರಶೇಖರ ಪಿ ನಿರೂಪಿಸಿದರು.ಜನಜಾಗೃತಿ ವೇದಿಕೆ ಸವಣೂರು ವಲಯದ ಅಧ್ಯಕ್ಷ ಮಹೇಶ್ ಕೆ.ಸವಣೂರು ಸ್ವಾಗತಿಸಿದರು.

ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ,ಗ್ರಾ.ಪಂ.ಸದಸ್ಯರಾದ ತೀರ್ಥರಾಮ ಕೆಡೆಂಜಿ, ಸತೀಶ್ ಅಂಗಡಿಮೂಲೆ, ಚಂದ್ರಾವತಿ ಸುಣ್ಣಾಜೆ,ಗಿರಿಶಂಕರ ಸುಲಾಯ ಸಿಎ ಬ್ಯಾಂಕ್ ನಿರ್ದೇಶಕಿ ವೇದಾವತಿ ಕೆಡೆಂಜಿ,ಸಿಎ ಬ್ಯಾಂಕ್ ಉಪ ಕಾರ್ಯನಿರ್ವಹಣಾಧಿಕಾರಿ ಕುಸುಮ ಪಿ.ಶೆಟ್ಟಿ ಅತಿಥಿಗಳನ್ನು ಗೌರವಿಸಿದರು.