Home latest BPL ಕಾರ್ಡ್ ಹೊಂದಿರುವ SC ST ಸಮುದಾಯದವರೇ ಗಮನಿಸಿ | ನಿಮಗೊಂದು ಮುಖ್ಯವಾದ ಮಾಹಿತಿ ಇಲ್ಲಿದೆ!!!

BPL ಕಾರ್ಡ್ ಹೊಂದಿರುವ SC ST ಸಮುದಾಯದವರೇ ಗಮನಿಸಿ | ನಿಮಗೊಂದು ಮುಖ್ಯವಾದ ಮಾಹಿತಿ ಇಲ್ಲಿದೆ!!!

Hindu neighbor gifts plot of land

Hindu neighbour gifts land to Muslim journalist

ಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಬಹಳ ಕಷ್ಟಕರ ಆಗಿರುತ್ತದೆ ಮತ್ತು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ. ಕೆಲವು ಸೌಲಭ್ಯಗಳನ್ನು ನೀಡಿ ಅವರನ್ನು ಪ್ರೋತ್ಸಾಹಿಸುತ್ತಿದೆ.

ಪ್ರಸ್ತುತ ಅಮೃತ ಜ್ಯೋತಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಎಲ್ಲ ಕುಟುಂಬಕ್ಕೆ ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯವಾಗಿ ಈ ಸೌಲಭ್ಯ ಪಡೆಯುವ ನಿಯಮಗಳು ಇಂತಿವೆ :
• ಫಲಾನುಭವಿಗಳು ದಿನಾಂಕ: 30-04-2022 ರ ಕೊನೆಯಲ್ಲಿ ಬಾಕಿ ಇರುವ ವಿದ್ಯುತ್ ಮೊತ್ತವನ್ನು ಸಂಪೂರ್ಣವಾಗಿ ಪಾವತಿ ಮಾಡಿರಬೇಕು.
• ಮಾಸಿಕ ವಿದ್ಯುತ್ ಬಳಕೆ ಗರಿಷ್ಟ 250 ಯುನಿಟ್‍ಗಳನ್ನು ಮೀರಬಾರದು.
• ಮಾಪಕ ಅಳವಡಿಕೆ ಮತ್ತು ಮಾಪಕವನ್ನು ಕಡ್ಡಾಯವಾಗಿ ಓದಲಾಗುವುದು.

ಉಚಿತ ವಿದ್ಯುತ್ ಸೌಲಭ್ಯ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
• ಬಿಪಿಎಲ್,
• ರೇಷನ್ ಕಾರ್ಡ್,
• ಆಧಾರ್ ಕಾರ್ಡ್ ಮತ್ತು
• ಜಾತಿ ಪ್ರಮಾಣ ಪತ್ರ (ಆರ್ ಡಿ ಸಂಖ್ಯೆ ಸಹಿತ) ದಾಖಲೆ ನೀಡಬೇಕು.

ವೀರೇಂದ್ರ ಹೆಚ್.ಆರ್ ಕಾರ್ಯನಿರ್ವಾಹಕ ಇಂಜಿನಿಯರ್(ವಿ)ಕಾರ್ಯ ಮತ್ತು ಪಾಲನೆ ವಿಭಾಗ, ಮೆಸ್ಕಾಂ ಶಿವಮೊಗ್ಗ ಇವರ ಪ್ರಕಾರ ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ‘ಸುವಿಧಾ’ ಪೋರ್ಟಲ್ ಅಥವಾ ಸಂಬಂಧಿಸಿದ ಮೆಸ್ಕಾಂ ಉಪವಿಭಾಗ/ಶಾಖಾ ಕಚೇರಿಗೆ ಭೇಟಿ ನೀಡಿ ಆನ್‍ಲೈನ್‍ನಲ್ಲಿ ನೋಂದಾಯಿಸಿ ಈ ಸೌಲಭ್ಯವನ್ನು ಪಡೆಯಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೇಲಿನ ನಿಯಮಗಳ ಅನುಸಾರ ಅಮೃತ ಜ್ಯೋತಿ ಯೋಜನೆಯಡಿಯಲ್ಲಿ 75 ಯೂನಿಟ್‍ಗಳವರೆಗೆ ಬಳಕೆಯ ವಿದ್ಯುತ್ ಶುಲ್ಕವನ್ನು ಡಿಬಿಟಿ ಮುಖಾಂತರ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಮಾಹಿತಿ ನೀಡಲಾಗಿದೆ.