# ಮಣಿಪಾಲದಲ್ಲಿ ಕಂದಕಕ್ಕೆ ಬಿದ್ದ ಶಾಲಾ ಬಸ್ – ವಿದ್ಯಾರ್ಥಿನಿಗೆ ಗಂಭೀರ ಗಾಯ!!

- Link: https://hosakannada.com/news/school-bus-falls-into-ditch-in-manipal-student-seriously-injured/
- Published: 2026-07-10T11:00:51+00:00
- Author: ಹೊಸಕನ್ನಡ ನ್ಯೂಸ್

ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಖಾಸಗಿ ಶಾಲಾ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ
ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ 

Sponsored

ಮಣಿಪಾಲದ ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ಹೋಗುವಾಗ
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಏಳು ಮಕ್ಕಳಿಗೆ
ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿನಿ ತಲೆಗೆ ತೀವ್ರ ಪೆಟ್ಟಾಗಿದೆ.

Advertisement

Advertisement

ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ
ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು
ಮಣಿಪಾಲ್ ಪೊಲೀಸರು ‌ಪರಿಶೀಲನೆ ನಡೆಸಿದ್ದಾರೆ.

Advertisement
