ಶನಿವಾರ, 7 ನವೆಂಬರ್ 2026

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Advertisement
Advertisement

ಉಜಿರೆ: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593 ಅಂಕಗಳನ್ನು ಪಡೆದಿದ್ದರು.

Sponsored

ಇನ್ನೊಂದೆಡೆ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅರ್ಪಿತಾ ಅಡಿಗ ಅವರು ಮರುಮೌಲ್ಯಮಾಪನದ ಬಳಿಕ 593 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಎಂಟನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

Advertisement
Advertisement

ಇಬ್ಬರೂ ವಿದ್ಯಾರ್ಥಿನಿಯರು ಇಂಗ್ಲಿಷ್ ವಿಷಯದಲ್ಲಿ ತಲಾ 3 ಹೆಚ್ಚುವರಿ ಅಂಕಗಳನ್ನು ಗಳಿಸಿ ಕಾಲೇಜಿನ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ.

Advertisement

ಈ ಸಾಧನೆಯ ಮೂಲಕ ಎಸ್‌ಡಿಎಂ ಪಿಯು ಕಾಲೇಜು ಮತ್ತೊಮ್ಮೆ ಶೈಕ್ಷಣಿಕ ಗುಣಮಟ್ಟ ಮತ್ತು ವಿದ್ಯಾರ್ಥಿ ಸಾಧನೆಯಲ್ಲಿ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ. ವಿದ್ಯಾರ್ಥಿನಿಯರ ಪರಿಶ್ರಮ, ಪೋಷಕರ ಪ್ರೋತ್ಸಾಹ ಹಾಗೂ ಶಿಕ್ಷಕರ ಮಾರ್ಗದರ್ಶನವೇ ಈ ಯಶಸ್ಸಿನ ಮೂಲ ಕಾರಣವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಈ ಹೆಮ್ಮೆಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದಿಂದ ಹೃತೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

Advertisement
Advertisement