# ಎಸ್.ಡಿ.ಎಂ ಕಾಲೇಜು ಉಜಿರೆ : 80 ನೇ ಸ್ವಾತಂತ್ರ್ಯ ಸಂಭ್ರಮಾಚರಣೆ

- Link: https://hosakannada.com/news/sdm-ujire-college-80th-independence-celebration/
- Published: 2026-08-15T15:03:12+00:00
- Author: ಹೊಸಕನ್ನಡ ನ್ಯೂಸ್

ಉಜಿರೆ, ಆ.15: ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಅಂಗಳವು 150 ವರ್ಷಗಳ 
ಐತಿಹಾಸಿಕ ಹಿನ್ನೆಲೆಯುಳ್ಳ ‘ವಂದೇ ಮಾತರಂ’ ಮಾಧುರ್ಯ, ‘2047ರ ವಿಕಸಿತ ಭಾರತಕ್ಕಾಗಿ ಯುವಶಕ್ತಿ’ 
ಧ್ಯೇಯ ಹಾಗೂ ರಾಷ್ಟ್ರಗೀತೆಯ ನಿನಾದದೊಂದಿಗೆ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಯಿತು.

Sponsored

ಎಸ್.ಡಿ.ಎಂ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಸಂಸ್ಥೆಯ ಅಧ್ಯಾಪಕ ಮತ್ತು ಅಧ್ಯಾಪಕೇತರ
ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಕಾಲೇಜಿನ ಶೈಕ್ಷಣಿಕ ಸಂಯೋಜನಾಧಿಕಾರಿ ಎಸ್.ಎನ್. ಕಾಕತ್ಕರ್ ಅವರು ಧ್ವಜಾರೋಹಣ
ನೆರವೇರಿಸಿದರು.

Advertisement

Advertisement

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ., ಎಸ್.ಡಿ.ಎಂ ಸ್ನಾತಕೋತ್ತರ
ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ. ಹಾಗೂ ಉಪ ಪ್ರಾಂಶುಪಾಲರಾದ ನಂದಕುಮಾರಿ ಕೆ.ಪಿ. ಉಪಸ್ಥಿತರಿದ್ದರು.
ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಜಿ.ಆರ್. ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಎನ್.ಎಸ್.ಎಸ್ ಸ್ವಯಂಸೇವಕರು
ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಸಿಹಿ ವಿತರಿಸಿದರು.

Advertisement
