ಶನಿವಾರ, 24 ಅಕ್ಟೋಬರ್ 2026

ದ್ವಿತೀಯ ಪಿಯುಸಿ ಫಲಿತಾಂಶ ಕೆಪಿಎಸ್ ಬೆಳ್ಳಾರೆ ಪದವಿ ಪೂರ್ವ ವಿಭಾಗ ಶೇ.100 ಫಲಿತಾಂಶ

ಕೆಪಿಎಸ್ ಬೆಳ್ಳಾರೆ ಪದವಿ ಪೂರ್ವ ವಿಭಾಗ ಶೇ.100 ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಳ್ಳಾರೆ ಕೆಪಿಎಸ್ ಪದವಿ ಪೂರ್ವ ವಿಭಾಗಕ್ಕೆ ಶೇ.100 ಫಲಿತಾಂಶ ಬಂದಿದೆ.

ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ.

ಕಲಾ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ.

ಇಬ್ಬರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 49 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ.7 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 6 ಮಂದಿ ವಿದ್ಯಾರ್ಥಿಗಳು ಹಾಜರಾಗಿ ಎಲ್ಲರೂ ಉತ್ತೀರ್ಣರಾಗಿ ಶೇ. 100 ಫಲಿತಾಂಶ ಬಂದಿದೆ. 2 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ವಾಣಿಜ್ಯ ವಿಭಾಗದ ಧೃತಿ ಬಿ.ಪೆರ್ಲಂಪಾಡಿ ಇವರು 558 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.