ಸೋಮವಾರ, 26 ಅಕ್ಟೋಬರ್ 2026
Trending

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯ ಶಿಕ್ಷಕ–ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ–ರಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Sponsored

ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷರಾಗಿ ಪ್ರವೀಣ್ ವಿ.ಜಿ., ನಡ ಅವರನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಪುರಂದರ ಕೆ. ಕೊಕ್ಕಡ, ಶ್ರೀಮತಿ ಭವಾನಿ ಬೆಳಾಲು ಹಾಗೂ ಪದ್ಮನಾಭ ಶೆಟ್ಟಿ ಅರ್ಕಜೆ ಮತ್ತು ಕಾರ್ಯದರ್ಶಿಯಾಗಿ ವಿಮಲಾಕ್ಷ ಓಡಿಳ್ನಾಲ ಅವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ, ವಿದ್ಯಾರ್ಥಿಗಳ ಶಿಸ್ತು ಹಾಗೂ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಪೋಷಕರು ಹಾಗೂ ಶಿಕ್ಷಕರು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವ ಅಗತ್ಯವನ್ನು ಒತ್ತಿಹೇಳಲಾಯಿತು.

ಕಾಲೇಜಿನ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಹಾಗೂ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಪೋಷಕರು ಹಾಗೂ ಶಿಕ್ಷಕ–ರಕ್ಷಕ ಸಂಘದ ನೂತನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.