Home News Puttur: ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಆರೋಪಿಗೆ ನಿರೀಕ್ಷಣಾ ಜಾಮೀನು

Puttur: ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಆರೋಪಿಗೆ ನಿರೀಕ್ಷಣಾ ಜಾಮೀನು

Uttarpradesh

Hindu neighbor gifts plot of land

Hindu neighbour gifts land to Muslim journalist

Puttur: ಪುತ್ತೂರು: ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಲೈಂಗಿಕ ದೌರ್ಜನ್ಯ ಎಸಗಿ ನಂತರ ಬೆದರಿಕೆಯೊಡ್ಡಿರುವ ಆರೋಪಿಗೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ಕುರಿತು ವರದಿಯಾಗಿದೆ.

ಉಪ್ಪಿನಂಗಡಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ಹಾಸನದಲ್ಲಿ ಕರ್ತವ್ಯ ಮಾಡುತ್ತಿರುವ ಮಹಿಳೆ ನೀಡುತ್ತಿರುವ ದೂರಿನ ಆಧಾರದಲ್ಲಿ ಹಾಸನದ ವಿಶ್ವೇಶ್ವರಯ್ಯ ಬಡಾವಣೆಯ ಸಚಿನ್‌ ಎನ್‌.ಆರ್ ಎಂಬಾತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಆರೋಪಿ ಸಚಿನ್‌ ಎನ್‌.ಆರ್‌ ಸಹಾಯ ಮಾಡುವ ನೆಪದಲ್ಲಿ ಉಪ್ಪಿನಂಗಡಿಯಲ್ಲಿದ್ದ ನನ್ನ ಮನೆಗೆ ಬಂದು, ನನ್ನ ತಂಗಿ ಮದುವೆಯಾದ ನಂತರ ನಿನ್ನನ್ನು ಮದುವೆಯಾಗುವುದಾಗಿ ಹೇಳಿ ಬಲವಂತನ ದೈಹಿಕ ಸಂಪರ್ಕ ಬೆಳೆಸಿದ್ದು, ನಂತರ ಕಡೆಗಣಿಸಲು ಶುರು ಮಾಡಿದ್ದು, ಹಾಸನಕ್ಕೆ ನನ್ನ ವರ್ಗಾವಣೆ ಮಾಡಿಕೊಂಡಿರುವುದಾಗಿಯೂ ದೂರಿನಲ್ಲಿ ಆರೋಪ ಮಾಡಲಾಗಿದೆ.

ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಆರೋಪಿಗೆ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Viral Video: ನದಿಯೊಳಗೆ ಬಿತ್ತು 4 ದಿನದ ಹಿಂದೆ ಖರೀದಿಸಿದ ಐಫೋನ್ – ಕೆಲವು ಗಂಟೆಯ ನಂತ್ರ ಮತ್ತೆ ಸಿಕ್ಕಾಗ ಕಾದಿತ್ತು ಅಚ್ಚರಿ!!