ಶನಿವಾರ, 24 ಅಕ್ಟೋಬರ್ 2026

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ಖುಲಾಸೆ

Brijbhushan Sharan Singh
Image source: India today

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಕುರಿತಂತೆ ಭಾರತೀಯ ಕುಸ್ತಿ ಫೆಡರೇಶನ್‌ ಮಾಜಿ ಅಧ್ಯಕ್ಷ ಹಾಗೂ ಉತ್ತರ ಪ್ರದೇಶದ ಮಾಜಿ ಸಂಸದ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ಅವರನ್ನು ನ್ಯಾಯಾಲಯವು ಖುಲಾಸೆ ಮಾಡಿದೆ. ಆರು ಮಂದಿ ಮಹಿಳಾ ಕುಸ್ತಿಪಟುಗಳು ಹೊರಿಸಿದ್ದ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣದಲ್ಲಿ ಬ್ರಿಜ್‌ಭೂಷಣ್‌ ಹಾಗೂ ಡಬ್ಲ್ಯೂಎಫ್‌ಐ ಮಾಜಿ ಕಾರ್ಯದರ್ಶಿ ವಿನೋದ್‌ ತೋಮರ್‌ ಅವರನ್ನು ನ್ಯಾಯಾಲಯವು ಖುಲಾಸೆ ಮಾಡಿದೆ.

ಎರಡು ವರ್ಷಗಳ ಕಾಲ ನಡೆದ ಸುದೀರ್ಘ ವಿಚಾರಣೆ ಮತ್ತು ವಾದ ಪ್ರತಿವಾದಗಳನ್ನು ಆಲಿಸಿದ ನಂತರ ನ್ಯಾಯಪೀಠವು ಈ ತೀರ್ಪನ್ನು ಪ್ರಕಟ ಮಾಡಿದೆ.

ಖುಲಾಸೆ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಬ್ರಿಜ್‌ಭೂಷಣ್‌, ನನಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆಯಿತ್ತು. ನ್ಯಾಯಾಲಯದ ತೀರ್ಪಿಗೆ ನಾನು ತಲೆಬಾಗುತ್ತೇನೆ ಎಂದು ಹೇಳಿದರು.