Home News Kalburagi: ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಇನ್ನಿಲ್ಲ – ಲಿಂಗೈಕ್ಯಕ್ಕೂ ಮುನ್ನ ಈಡೇರಿತು...

Kalburagi: ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಇನ್ನಿಲ್ಲ – ಲಿಂಗೈಕ್ಯಕ್ಕೂ ಮುನ್ನ ಈಡೇರಿತು ಕೊನೆ ಆಸೆ !!

Hindu neighbor gifts plot of land

Hindu neighbour gifts land to Muslim journalist

Kalaburagi: ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ, ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪ (90) ಅವರು ಗುರುವಾರ ರಾತ್ರಿ 9.23ಕ್ಕೆ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಶರಣಬಸವಪ್ಪ ಅಪ್ಪನವರು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆಯಷ್ಟೇ ಆಸ್ಪತ್ರೆಯಿಂದ ಡಿಸ್ವಾರ್ಜ್ ಮಾಡಿಕೊಂಡು ಮಹಾಮನೆಗೆ ಶಿಫ್ಟ್ ಮಾಡಲಾಗಿತ್ತು. ಮನೆಯಲ್ಲಿಯೇ ಆಸ್ಪತ್ರೆಯಲ್ಲಿನ ಸಕಲ ವ್ಯವಸ್ಥೆ ಕಲ್ಪಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ ಶೈಕ್ಷಣಿಕ ಕ್ರಾಂತಿ ಮಾಡಿದ್ದ ಶರಣಬಸವಪ್ಪ ಅವರು ಶರಣಬಸವೇಶ್ವರ ವಿಶ್ವವಿದ್ಯಾಲಯ, ಶರಣಬಸವೇಶ್ವರ ರೆಸಿಡೆನ್ಷಿಯಲ್ ಪಬ್ಲಿಕ್ ಸ್ಕೂಲ್, ಅಪ್ಪ ಪಬ್ಲಿಕ್ ಸ್ಕೂಲ್‌, ಗೋದುತಾಯಿ ಮಹಿಳಾ ಕಾಲೇಜು, ಎಂಜಿನಿಯರಿಂಗ್, ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜುಗಳನ್ನು ಆರಂಭಿಸಿ ಹೊಸ ಎತ್ತರಕ್ಕೆ ಕೊಂಡೊಯ್ದರು. 1983ರಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಯಾಗಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಅಪ್ಪಾಜಿ ಅವರು ಪೀಠಾರೋಹಣ ಮಾಡಿದ ನಂತರ ಈ ಭಾಗದಲ್ಲಿ ಸಂಘವು ಶಿಕ್ಷಣದಲ್ಲಿ ಗುಣಮಟ್ಟವನ್ನು ಖಾತರಿಪಡಿಸಲು ಶ್ರಮಿಸಿದ್ದಾರೆ.

ಇನ್ನು ಲಿಂಗೈಕ್ಕೆಕ್ಕೂ ಮುನ್ನ ಅವರು ತಮ್ಮ ಕೊನೆ ಆಸೆ ಈಡೇರಿಸಿಕೊಂಡಿದ್ದಾರೆ.  ಹೌದು, ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ತಮ್ಮ ಅಂತಿಮ ಇಚ್ಛೆಯಂತೆ ಶ್ರೀ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರು ಎಳೆದಿದ್ದಾರೆ.