ಹಾವೇರಿ: ಶಿಗ್ಗಾವಿ ಪಟ್ಟಣದ ಆಂಜನೇಯ ಹಾಗೂ ಬನ್ನಿ ಮಹಾಕಾಳಿ ದೇಗುಲದ ಆವರಣದಲ್ಲಿ ಮುಸ್ಲಿಂ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿಗ್ಗಾವಿ ತಾಲೂಕಿನ ಟ್ಯಾಕ್ಸಿ ಸರ್ಕಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರು, ಘಟನೆಗೆ ಕಾರಣ ಎನ್ನಲಾಗಿರುವ ಜಾಫರ್ ಎಂಬ ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಆತನಿಂದಲೇ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಬೇಕು ಹಾಗೂ ಆತನನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಶಿಗ್ಗಾವಿ ಬಂದ್‌ಗೆ ಕರೆ ನೀಡುವುದಾಗಿ ಹಿಂದೂಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸ್ಥಳದಲ್ಲಿ ಒಂದು ಕೆಎಸ್‌ಆರ್‌ಪಿ ಹಾಗೂ ಡಿಎಆರ್ ತುಕಡಿಯ ಜೊತೆಗೆ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.



