ಶಿಶಿಲ: ಇಲ್ಲಿನ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ.18ರಂದು ಪತ್ತೆಯಾಗಿದೆ.
ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಅಗತ್ಯ ಕಾರ್ಯಾಚರಣೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿನ್ನಮ್ಮ ಅವರ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.



