Home » ಮಕ್ಕಳ ಬೆನ್ನಿಗೆ ರಕ್ತ ಬರುವಂತೆ ಥಳಿಸಿದ ರಾಕ್ಷಸಿ ಕೃತ್ಯ..! ಆಗಿದ್ದೇನು ಗೊತ್ತಾ?

ಮಕ್ಕಳ ಬೆನ್ನಿಗೆ ರಕ್ತ ಬರುವಂತೆ ಥಳಿಸಿದ ರಾಕ್ಷಸಿ ಕೃತ್ಯ..! ಆಗಿದ್ದೇನು ಗೊತ್ತಾ?

0 comments

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆ ಎಂಬ ಕಾರಣಕ್ಕೆ ಮೂವರು ಪುಟ್ಟ ವಿದ್ಯಾರ್ಥಿಗಳ ಬೆನ್ನಿಗೆ ರಕ್ತ ಬರುವಂತೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ಹಲ್ಲೆ ನಡೆಸಿದ ಆರೋಪ ನಡೆದಿರುವುದು ಬೆಳಕಿಗೆ ಬಂದಿದೆ

ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುವಾಸೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಎರಡನೇ, ಮೂರನೇ ಹಾಗೂ ನಾಲ್ಕನೇ ತರಗತಿಯ ಮೂವರು ವಿದ್ಯಾರ್ಥಿಗಳ ಮೇಲೆ ರಕ್ಷಿತಾ ಎಂಬ ಅತಿಥಿ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಮಕ್ಕಳ ಬೆನ್ನಿನ ಮೇಲೆ ಗಾಯಗಳಾಗಿದ್ದು, ಮನೆಗೆ ತೆರಳಿದ ಬಳಿಕ ಪೋಷಕರ ಗಮನಕ್ಕೆ ಘಟನೆ ಬಂದಿದೆ. ಮಕ್ಕಳಿಗೆ ಗಾಯಗಳಾಗಿರುವುದನ್ನು ಕಂಡು ಪೋಷಕರು ಆತಂಕಗೊಂಡಿದ್ದಾರೆ.

ಮಕ್ಕಳ ಮೇಲೆ ಹಲ್ಲೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ, ಆರೋಪ ಸಾಬೀತಾದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

You may also like