Home latest LPG ಗ್ರಾಹಕರಿಗೆ ಮತ್ತೆ ಶಾಕ್ ನೀಡಿದ ಕೇಂದ್ರ ಸರ್ಕಾರ!

LPG ಗ್ರಾಹಕರಿಗೆ ಮತ್ತೆ ಶಾಕ್ ನೀಡಿದ ಕೇಂದ್ರ ಸರ್ಕಾರ!

Hindu neighbor gifts plot of land

Hindu neighbour gifts land to Muslim journalist

ನವದೆಹಲಿ: ಎಲ್ ಪಿಜಿ ಸಿಲಿಂಡರ್ ಬೆಲೆಗೆ ತತ್ತರಿಸಿ ಹೋದ ಜನತೆಗೆ ಮತ್ತೊಮ್ಮೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲಾಗುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ.

ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೋವಿಡ್ ಶುರುವಾದ ದಿನದಿಂದ ಎಲ್‌ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ನು ಮುಂದು ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ. ದೇಶದ ಎಲ್ಲ ಪ್ರಜೆಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ.

ಸದ್ಯ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್ ಬೆಲೆ 1006 ರೂಪಾಯಿ ಇದ್ದು, ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿ ಸಿಗಲಿದೆ.

ಈ ಮೊದಲು ಗೃಹ ಬಳಕೆಯ ಸಿಲಿಂಡರ್ ಗಳಿಗೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ, ಸಬ್ಸಿಡಿ ಸಿಲಿಂಡರ್‌ ದುರುಪಯೋಗ ಆಗುತ್ತಿರುವ ವಿಚಾರ ತಿಳಿದು ಮೋದಿ ಸರ್ಕಾರ ಸಿಲಿಂಡರ್‌ ಖರೀದಿ ಮಾಡಿದ ಬಳಿಕ ಬ್ಯಾಂಕ್‌ ಖಾತೆಗೆ ಸಬ್ಸಿಡಿ ದುಡ್ಡನ್ನು ಹಾಕುತ್ತಿತ್ತು. ಆದರೆ ಕೋವಿಡ್‌ ಬಳಿಕ ಸಬ್ಸಿಡಿ ಮೊತ್ತ ಹಾಕುವುದನ್ನು ಸ್ಥಗಿತಗೊಳಿಸಿದೆ.