Home News Congress: ಗ್ಯಾರಂಟಿ ಯೋಜನೆ ಸಮಾವೇಶ ನೆಪದಲ್ಲೂ ಸಿದ್ದರಾಮಯ್ಯ ವಂಚನೆ: ಲೋಕಾಯುಕ್ತರಿಗೆ ದೂರು

Congress: ಗ್ಯಾರಂಟಿ ಯೋಜನೆ ಸಮಾವೇಶ ನೆಪದಲ್ಲೂ ಸಿದ್ದರಾಮಯ್ಯ ವಂಚನೆ: ಲೋಕಾಯುಕ್ತರಿಗೆ ದೂರು

Hindu neighbor gifts plot of land

Hindu neighbour gifts land to Muslim journalist

Congress: ಇತ್ತೀಚಿಗೆ ಮುನ್ನಲೆಗೆ ಬಂದ ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದವರು ರಾಜೀನಾಮೆ ನೀಡಲು ಬೆನ್ನು ಬಿಡದೆ ಕಾಡುತ್ತಿದ್ದಾರೆ. ಇದೀಗ ಇದರ ಬೆನ್ನಲ್ಲೇ ಕಾಂಗ್ರೆಸ್ (Congress) ಪಕ್ಷದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮೋಸ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಹೌದು, ಧಾರವಾಡದ ಲೋಕಾಯುಕ್ತಕ್ಕೆ ಧಾರವಾಡ ಜಿಲ್ಲೆಯ ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಯರಗುಪ್ಪಿ ಎನ್ನುವವರು ದೂರು ನೀಡಿದ್ದು, ದೂರಿನ ಪ್ರಕಾರ, ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಏನೋ ಜಾರಿಗೆ ಬಂದಿದೆ ಮಾಡಿತು. ಆ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ದೊಡ್ಡ ದೊಡ್ಡ ಸಮಾವೇಶಗಳನ್ನು ರಾಜ್ಯ ಸರ್ಕಾರ ಮಾಡಿತು. ಆದ್ರೆ ನವಲಗುಂದದ ಸಮಾವೇಶ ಮುಗಿದ ಬಳಿಕ ಮುಗಿದ ಬಳಿಕ ಊಟದ ಕೊಟೇಶನ್ ಪಡೆಯಲಾಗಿದೆ. ಆದರೆ ಕೊಟೇಶನ್ ಸಲ್ಲಿಕೆಗೂ ಮುನ್ನವೇ ಊಟ, ಉಪಾಹಾರ ಪೂರೈಕೆ ಮಾಡಲಾಗಿದೆ. ಅಲ್ಲದೇ ಕುಂದಗೋಳ ಸಮಾವೇಶದಲ್ಲಿನ ಊಟ, ಉಪಹಾರದ ಕೊಟೇಶನ್‌ಗೆ ಸಹಿಯೇ ಇಲ್ಲ. ಈ ಸಮಾವೇಶಗಳ ಬಹುತೇಕ ಲೆಕ್ಕಪತ್ರಗಳು ಸರಿಯಾಗಿಲ್ಲ ಎಂದು ಆರೋಪಿಸಿದ್ದು, ಗ್ಯಾರಂಟಿ ಸಮಾವೇಶದ ಕಾರ್ಯಕ್ರಮ ನಿರ್ವಹಣಾ ಸಮಿತಿ ವಿರುದ್ಧ ಆರ್‌ಟಿಐ ಕಾರ್ಯಕರ್ತ ದೂರು ದಾಖಲಿಸಿದ್ದಾರೆ.

ಮುಖ್ಯವಾಗಿ ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 5 ಗ್ಯಾರಂಟಿ ಸಮಾವೇಶಗಳು ನಡೆದಿದ್ದವು. ಅದರಲ್ಲಿ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದ ಸಮಾವೇಶದ ಲೆಕ್ಕಪತ್ರಗಳಲ್ಲಿ ಗೋಲ್ಮಾಲ್ ಆಗಿದೆ ಎಂದು ನವಲಗುಂದದ ಆರ್‌ಟಿಐ ಕಾರ್ಯಕರ್ತ ಅವರು ಆರೋಪ ಮಾಡಿದ್ದಾರೆ.