Home Karnataka State Politics Updates ರಾಷ್ಟ್ರ ರಾಜಕರಣದ ಎಂಟ್ರಿ ಕುರಿತು ಸ್ಪೋಟಕ ಹೇಳಿಕೆ ನೀಡಿ ಸಿದ್ದರಾಮಯ್ಯ !! ಪ್ರಧಾನಿ ಅಭ್ಯರ್ಥಿಯಾಗಿ ಕರ್ನಾಟಕ...

ರಾಷ್ಟ್ರ ರಾಜಕರಣದ ಎಂಟ್ರಿ ಕುರಿತು ಸ್ಪೋಟಕ ಹೇಳಿಕೆ ನೀಡಿ ಸಿದ್ದರಾಮಯ್ಯ !! ಪ್ರಧಾನಿ ಅಭ್ಯರ್ಥಿಯಾಗಿ ಕರ್ನಾಟಕ ಸಿಎಂ ಕಣಕ್ಕೆ ?

Hindu neighbor gifts plot of land

Hindu neighbour gifts land to Muslim journalist

Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಷ್ಟ್ರ ರಾಜಕಾರಣಕ್ಕೆ ಧುಮುಕುವ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು, ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಯಾಗುವ ಕುರಿತು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಈ ವೇಳೆ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳಾಗಬೇಕೆಂದು (prime minister) ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿದರು. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ಹೇಳಿದರು.

ಮಹದಾಯಿ ಯೋಜನೆಯ ಬಗ್ಗೆ ಮಾತನಾಡಿದ ಅವರು, ಈ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದೆ. ಆದರೆ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಅಲ್ಲದೆ, ಈ ವೇಳೆ ಹಲವಾರು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕೈಗೊಳ್ಳಲಾಗುತ್ತಿದೆ ಎಂದರು. ಜೊತೆಗೆ ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸುವ ಬಗ್ಗೆ ಮಾತನಾಡಿದ್ದಾರೆ.
ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.