Home Karnataka State Politics Updates ಕಾಂಗ್ರೆಸ್‌ಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತಮಹೋತ್ಸವದ ಸಿದ್ಧತೆ ಮುಖ್ಯ -ಡಿ.ಕೆ.ಶಿವಕುಮಾರ್

ಕಾಂಗ್ರೆಸ್‌ಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತಮಹೋತ್ಸವದ ಸಿದ್ಧತೆ ಮುಖ್ಯ -ಡಿ.ಕೆ.ಶಿವಕುಮಾರ್

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ನನಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತಮಹೋತ್ಸವದ ಸಿದ್ಧತೆ ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ನೀಡಿದ್ದು,ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಡಿ.ಕೆ ಶಿವಕುಮಾರ್ ಅವರು ಈ ಹೇಳಿಕೆ ನೀಡಿದ್ದು, ಸೋನಿಯಾ ಗಾಂಧಿ ಅವರು ಆ.15ರಂದು ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಚಾರವಾಗಿ ನನಗೆ ಜವಾಬ್ದಾರಿ ವಹಿಸಿದ್ದು, ಕಾಂಗ್ರೆಸ್‌ ನಾಯಕರು ಮತ್ತು 75 ಸಾವಿರದಿಂದ ಒಂದು ಲಕ್ಷ ಕಾರ್ಯಕರ್ತರು ಬೆಂಗಳೂರಲ್ಲಿ ಮೆರವಣಿಗೆ ಮಾಡಲಿದ್ದಾರೆ ಎಂದರು.

ಜತೆಗೆ 75 ಕಿ.ಮೀ.ಪಾದಯಾತ್ರೆ ಮಾಡಲು ಹೇಳಿದ್ದಾರೆ. ಇದನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದ್ದು, ಈ ವಿಚಾರವಾಗಿ ಗುರುವಾರ ಸಭೆ ಕರೆಯಲಾಗಿದೆ. ಪಕ್ಷದ ಹೈಕಮಾಂಡ್‌ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.

ಕಾಂಗ್ರೆಸ್‌ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು, ಸಂವಿಧಾನವನ್ನು ನೀಡಿದೆ. ಈ ಕಾರ್ಯಕ್ರಮದ ಆಚರಣೆ ನಮ್ಮ ಕರ್ತವ್ಯ. ಈ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‌ ಪಾತ್ರವನ್ನು ಎಲ್ಲರಿಗೂ ತಿಳಿಸಬೇಕಿದೆ. ಉಳಿದಂತೆ ನಾಯಕರ ಹುಟ್ಟುಹಬ್ಬ ಆಚರಣೆ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ ಎಂದರು.