ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡಗೀತೆ ಜೈ ಭಾರತ ಜನನಿಯ ತನುಜಾತೆಯಲ್ಲಿ ಮಹತ್ವದ ಬದಲಾವಣೆಯೊಂದು ಆಗುವ ಸಾಧ್ಯತೆಯಿದೆ. ನಾಡಗೀತೆಯಲ್ಲಿ ಜೈನ ಧರ್ಮದ ಉಲ್ಲೇಖದ ಜೊತೆಗೆ ಬೌದ್ಧ ಧರ್ಮದ ಹೆಸರನ್ನು ಸೇರ್ಪಡೆ ಮಾಡಲು ಚಿಂತನೆ ನಡೆಸಲಾಗುತ್ತಿದೆ.
Sponsoredಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದ ಸಮಿತಿಯು ಈ ಸಲಹೆಯನ್ನು ನೀಡಿದ್ದು, ಈ ಕುರಿತು ಸರಕಾರಕ್ಕೆ ಅಧಿಕೃತ ಮನವಿ ಸಲ್ಲಿಕೆಯಾಗಿದೆ.
ಪುರುಷೋತ್ತಮ ಬಿಳಿಮಲೆ ಸಮಿತಿಯ ಸಲಹೆಯ ಅನುಸಾರ, ಇನ್ನು ಮುಂದೆ ಜೈನ ಬೌದ್ಧರ ಪೂಜ್ಯ ಉದ್ಯಾನʼ ಅಥವಾ ಜೈನರುದ್ಯಾನದ ಜೊತೆಗೆ ಬೌದ್ಧರುದ್ಯಾನ ಎಂದು ಬದಲಾಯಿಸಲು ಪ್ರಸ್ತಾಪಿಸಲಾಗಿದೆ. ಮೂಲ ಕಾವ್ಯದಲ್ಲಿ ಬೌದ್ಧ ಧರ್ಮದ ನೇರ ಉಲ್ಲೇಖ ಇರಲಿಲ್ಲ ಎನ್ನಲಾಗಿದೆ.




