Home News Limca Book of Records: ಗಾಯಕ ‘ಜುಬೀನ್ ಗಾರ್ಗ್’ ಅಂತಿಮ ಯಾತ್ರೆ ‘ಲಿಮ್ಕಾ ದಾಖಲೆ’ಗೆ ಸೇರ್ಪಡೆ

Limca Book of Records: ಗಾಯಕ ‘ಜುಬೀನ್ ಗಾರ್ಗ್’ ಅಂತಿಮ ಯಾತ್ರೆ ‘ಲಿಮ್ಕಾ ದಾಖಲೆ’ಗೆ ಸೇರ್ಪಡೆ

Hindu neighbor gifts plot of land

Hindu neighbour gifts land to Muslim journalist

Limca Book of Records: ಸ್ಕೂಬಾ ಡೈವಿಂಗ್‌ ವೇಳೆ ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ (Zubeen Garg) ಮೃತ ಪಟ್ಟಿದ್ದರು. ಗಾಯಕ ಜುಬೀನ್ ಗಾರ್ಗ್ ಅವರ ಅಂತಿಮ ಯಾತ್ರೆ ಸೆ.21ರಂದು ಗುವಾಹಟಿಯಲ್ಲಿ ನಡೆಯಿತು. ಈ ವೇಳೆ ಲಕ್ಷಾಂತರ ಜನರು ಭಾಗಿಯಾಗಿದ್ದರು. ಈ ಮೂಲಕ ವಿಶ್ವದಲ್ಲೇ ಅತೀ ಹೆಚ್ಚು ಜನರು ಸೇರಿದ 4ನೇ ಅಂತಿಮ ಯಾತ್ರೆ ಎಂದು ದಾಖಲೆ ನಿರ್ಮಿಸಿ, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ( Limca Book of Records) ಸೇರ್ಪಡೆಯಾಗಿದೆ.

ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪ್ರಕಾರ, ಮೈಕೆಲ್ ಜಾಕ್ಸನ್, ಪೋಪ್ ಫ್ರಾನ್ಸಿಸ್, ರಾಜಕುಮಾರಿ ಡಯಾನಾ ಮತ್ತು ರಾಣಿ ಎಲಿಜಬೆತ್ ಅವರಿಗೆ ನೀಡಿದಂತೆ ಇದು ಕೂಡ ಸ್ಮರಣೀಯ ವಿದಾಯ ಎಂದು ಗುರುತಿಸಲಾಗಿದೆ.

1972ರಲ್ಲಿ ಜನಿಸಿದ ಗಾರ್ಗ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಸಂಗೀತದಲ್ಲಿ ನಿರತರಾಗಿದ್ರು. ಅಸ್ಸಾಂ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಜುಬೀನ್ ಗರ್ಗ್ ತಮ್ಮ ಮೂರನೇ ವಯಸ್ಸಿನಲ್ಲೇ ಹಾಡಲು ಆರಂಭಿಸಿದ್ದಾರೆ. ಇವರು ಅಸ್ಸಾಮಿ ಮತ್ತು ಹಿಂದಿ ಮಾತ್ರವಲ್ಲದೆ, ಬಂಗಾಳಿ, ಮರಾಠಿ, ತಮಿಳು, ತೆಲುಗು ಮತ್ತು ನೇಪಾಳಿ ಸೇರಿದಂತೆ ಹಲವು ಭಾಷೆಗಳಿಗೆ ಹಾಡಿದ್ದಾರೆ. ಅವರ ಮೊದಲ ಆಲ್ಬಂ ‘ಅನಾಮಿಕಾ’ 1992 ರಲ್ಲಿ ಬಿಡುಗಡೆಯಾಯಿತು. ‘ಮಾಯಾ’, ‘ಜುಬೀನೋರ್ ಗಾನ್’, ‘ಕ್ಸಾಬ್ಡಾ’, ‘ಪಾಖಿ’, ‘ಶಿಶು’, ‘ಜಂತ್ರ’ ಅವರ ಅತ್ಯಂತ ಪ್ರೀತಿಯ ಅಸ್ಸಾಮೀಸ್ ಆಲ್ಬಂಗಳಲ್ಲಿ ಕೆಲವು. ಅವರು ‘ದಿಲ್ ಸೆ’, ‘ವಾಸ್ತವ್’, ‘ಫಿಜಾ’, ‘ಅಶೋಕ’, ‘ಕಾಂಟೆ’, ‘ಗ್ಯಾಂಗ್‌ಸ್ಟರ್’, ‘ಕ್ರಿಶ್ 3’ ಮತ್ತು ಇನ್ನೂ ಹೆಚ್ಚಿನ ಹಿಂದಿ ಚಿತ್ರಗಳಿಗೂ ಹಾಡಿದ್ದಾರೆ. ಇನ್ನು ಗ್ಯಾಂಗ್‌ಸ್ಟರ್‌ಗಾಗಿ ಅವರು ಹಾಡಿದ್ದ ‘ಯಾ ಅಲಿ’ ಹಾಡು ಅವರಿಗೆ ಅಸ್ಸಾಂನ ಹೊರಗೂ ಜನಪ್ರಿಯತೆ ತಂದುಕೊಟ್ಟಿತು.

ಇದನ್ನೂ ಓದಿ:Supreme Court: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ವಿರುದ್ಧ ಸಿಬಿಐ ಕೇಸ್ ವಾಪಸ್