# PSI ಗೆ ಕಪಾಳಮೋಕ್ಷ – MLA ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR

- Link: https://hosakannada.com/news/slap-to-psi-fir-against-mla-suresh-gowda-daughter-aishwarya/
- Published: 2026-08-14T09:13:02+00:00
- Author: ಹೊಸಕನ್ನಡ ನ್ಯೂಸ್

ಸರ್ಕಾರಿ ಅಧಿಕಾರಿಗಳ ಮೇಲೆ ಜನಪ್ರತಿನಿಧಿಗಳ ಮಕ್ಕಳು, ಕುಟುಂಬದವರು ದರ್ಪ ತೋರುತ್ತಿರುವಂತಹ ಪ್ರಕರಣಗಳು
ಇತ್ತೀಚಿಗೆ ಯಥೇಚ್ಛವಾಗಿ ದಾಖಲಾಗುತ್ತಿವೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ.
ಇದರ ನಡುವೆ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ, ಮಹಿಳಾ ಪಿಎಸ್‌ಐಗೆ
ಕಪಾಳಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಬೆಳಕಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಅವರ 
ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. 

Sponsored

ಶ್ರೀರಂಗಪಟ್ಟಣ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ (PSI) ಸವಿತಾ ಅವರು ನೀಡಿದ
ದೂರಿನನ್ವಯ ಐಶ್ವರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

Advertisement

Advertisement

ಆ.12ರಂದು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನದಲ್ಲಿ ಭೀಮನ ಅಮಾವಾಸ್ಯೆ ಹಿನ್ನೆಲೆ
ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ವೇಳೆ ಶಾಸಕರ ಪುತ್ರ ಐಶ್ವರ್ಯ ಅವರು ತಮ್ಮ ಪ್ರಭಾವ
ಬಳಸಿ ವಿಐಪಿ ಪ್ರವೇಶ ಪಡೆದಿದ್ದರು. ಗರ್ಭಗುಡಿ ಬಳಿ ಬಂದು ನಿಂತು ಒಳಗೆ ಬಿಡಿ ಎಂದು ಕೇಳಿದರು. ಅದಕ್ಕೆ
ಇಂದು ಆಗಲ್ಲ, ಹೆಚ್ಚಿನ ಜನರಿದ್ದಾರೆ. ನಿಮ್ಮನ್ನು ಬಿಟ್ಟರೆ ಸಾಲಿನಲ್ಲಿ ನಿಂತ ಭಕ್ತರು ಗಲಾಟೆ ಮಾಡುತ್ತಾರೆ.
ಹೀಗಾಗಿ ಸ್ವಲ್ಪ ಹೊತ್ತು ಕಾಯಿರಿ ಎಂದು ಪಿಎಸ್‌ಐ ಸವಿತಾ ಹೇಳಿದ್ದರು.

ಇದರ ನಡುವೆಯೂ ನಾನು ಹೋಗಬೇಕು ಬಿಡಿ ಎಂದು ಇಬ್ಬರ ನಡುವೆ ವಾಗ್ವಾದ ನಡೆದು, ಕೊನೆಗೆ ಐಶ್ವರ್ಯ ಅವರು
ಪಿಎಸ್‌ಐ ಸವಿತಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿರುವುದಾಗಿ ದೂರಿನಲ್ಲಿ 
ಉಲ್ಲೇಖಿಸಿದ್ದಾರೆ. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Advertisement
