Home News Soujanya Murder Case: ʼಸೌಜನ್ಯʼ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು-ಹೈಕೋರ್ಟ್‌

Soujanya Murder Case: ʼಸೌಜನ್ಯʼ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು-ಹೈಕೋರ್ಟ್‌

Hindu neighbor gifts plot of land

Hindu neighbour gifts land to Muslim journalist

Soujanya Murder Case: ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆ ನಡೆಸಬಹುದು ಎಂದು ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಮಾ.18 ರಂದು ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜನೆ ಮಾಡಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆ ನಿಲ್ಲಿಸುವಂತೆ ಶೇಷಾದ್ರಿಪುರಂ ಪೊಲೀಸರು ನೀಡಿದ್ದ ನೋಟಿಸ್‌ ರಿಟ್‌ ಅರ್ಜಿ ವಿಚೃಣೆ ಮಾಡಿದ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಆದೇಶ ನೀಡಿದ್ದಾರೆ.

ಸಮಾಲೋಚನಾ ಸಭೆಯ ಸಂಚಾಲಕರಾದ ವಿನಯ್‌ ಶ್ರೀನಿವಾಸ್‌ ಮತ್ತು ವಿಜಯಭಾಸ್ಕರ್‌ ಅವರ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್‌ ಅರ್ಜಿ ಸಲ್ಲಿಸಿದ್ದರು.

ʼಪೊಲೀಸರು ಮತ್ತು ಸರಕಾರ ಸಭೆ, ಪ್ರತಿಭಟನೆಯನ್ನು ತಡೆಯುವಂತಿಲ್ಲ. ಆದರೆ ಕಾನೂನು ಉಲ್ಲಂಘನೆಯಾದಲ್ಲಿ ಮಾತ್ರ ಪೊಲೀಸರು ಕ್ರಮ ಕೈಗೊಳ್ಳಬಹುದು. ಊಹೆಯ ಆಧಾರದಲ್ಲಿ ಪ್ರತಿಭಟನೆ ತಡೆಯುವಂತಿಲ್ಲʼ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಆದೇಶಿಸಿದ್ದಾರೆ.