Home News Sourav Ganguly Car Accident: ಸೌರವ್‌ ಗಂಗೂಲಿ ಕಾರು ಭೀಕರ ಅಪಘಾತ

Sourav Ganguly Car Accident: ಸೌರವ್‌ ಗಂಗೂಲಿ ಕಾರು ಭೀಕರ ಅಪಘಾತ

Hindu neighbor gifts plot of land

Hindu neighbour gifts land to Muslim journalist

Kolkatta: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಅವರು ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದಾಗ ಅಪಘಾತ ನಡೆದಿದೆ. ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಕಾರು ದುರ್ಗಾಪುರ ಎಕ್ಸ್‌ಪ್ರೆಸ್‌ವೇ ಮೂಲಕ ಹಾದುಹೋಗುವಾಗ ಸಿಂಗೂರ್‌ ಬಳಿ ಲಾರಿಯೊಂದು ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದಿದೆ.

 

ಲಾರಿ ಡಿಕ್ಕಿಯಾಗುತ್ತಿದ್ದಂತೆ ಸೌರವ್‌ ಗಂಗೂಲಿ ಅವರ ಕಾರಿನ ಚಾಲಕ ಕಾರಿನ ನಿಯಂತ್ರಣ ಪಡೆಯಲು ಕೂಡಲೇ ಬ್ರೇಕ್‌ ಹಾಕಿದಾಗ ಬೆಂಗಾವಲು ಪಡೆಯ ಎಲ್ಲಾ ವಾಹನಗಳು ಒಂದರ ನಂತರ ಒಂದರಂತೆ ಸೌರವ್‌ ಗಂಗೂಲಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸೌರವ್‌ ಗಂಗೂಲಿ ಅವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ರಸ್ತೆಯಲ್ಲಿಯೇ 10 ನಿಮಿಷ ಇದ್ದ ಸೌರವ್‌ಗಂಗೂಲಿ ಅವರು ನಂತರ ಬರ್ಧಮಾನ್‌ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೇರೆ ವಾಹನದಲ್ಲಿ ತೆರಳಿದರು.