# ಸೌತಡ್ಕ: ದೇವಸ್ಥಾನದ ಹೂವಿನ ಅಂಗಡಿ ವಿಚಾರದಲ್ಲಿ ಗಲಾಟೆ: ಎರಡು ಪ್ರತ್ಯೇಕ ಪ್ರಕರಣ ದಾಖಲು

- Link: https://hosakannada.com/news/southadka-uproar-over-the-temple-flower-shop-issue-two-separate-cases-filed/
- Published: 2026-10-18T18:02:07+00:00
- Author: ಹೊಸಕನ್ನಡ ನ್ಯೂಸ್

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ
ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್‌
ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sponsored

ದೇವಸ್ಥಾನದ ಟ್ರಸ್ಟ್‌ಗೆ ಸೇರಿದ ಅಂಗಡಿಗಳ ಏಲಂ ಪ್ರಕ್ರಿಯೆಯ ಮೂಲಕ ರಾಘವ ಎನ್ನುವವರು ಹೂವಿನ ಸ್ಟಾಲ್‌
ಪಡೆದಿದ್ದರು. ಆದರೆ ಏಲಂ ಪ್ರಕ್ರಿಯೆ ಪೂರ್ಣಗೊಂಡ ನಂತರವೂ ಈ ಹಿಂದೆ ಅಂಗಡಿ ನಡೆಸುತ್ತಿದ್ದ ವ್ಯಾಪಾರಿ
ಅಂಗಡಿಯನ್ನು ತೆರವು ಮಾಡದೆ ಮುಂದುವರಿಸಿದ್ದರು ಎಂದು ವರದಿಯಾಗಿದೆ.

Advertisement

Advertisement

ಈ ವಿಚಾರಕ್ಕೆ ಕುರಿತಂತೆ ರಾಘವ ಭಂಡಾರಿ ಎಂಬುವವರು ಇಂದು ಏಕಾಏಕಿ ಅಂಗಡಿಗೆ ಬಂದಿದ್ದು, ಆಗ ಎರಡೂ 
ಕಡೆಯ ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಅದು ವಿಕೋಪಕ್ಕೆ ಹೋಗಿದೆ ಎಂದು ಆರೋಪಿಸಲಾಗಿದೆ.
ಈ ವೇಳೆ ಮಹಿಳೆಯರ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂದು ಆರೋಪ ಕೇಳಿ ಬಂದಿದೆ.

ಈ ಘಟನೆಗೆ ಕುರಿತಂತೆ ರಾಘವ ಭಂಡಾರಿ ಅವರ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಎರಡನೇ ಪ್ರಕರಣ: ಸೌತಡ್ಕ ದೇವಸ್ಥಾನದ ಬಳಿಯ ಅಂಗಡಿಯಲ್ಲಿ ಹರಿಶ್ಚಂದ್ರ ಅವರು ವ್ಯಾಪಾರ ನಡೆಸುತ್ತಿದ್ದ
ವೇಳೆ, ರಾಘವ ಭಂಡಾರಿ, ಲಿಂಗಪ್ಪ, ಕಿಶೋರ್‌ ಮತ್ತು ಚೇತನ್‌ ಎನ್ನುವವರು ಅಂಗಡಿಯೊಳಗೆ ಅಕ್ರಮ ಪ್ರವೇಶಿಸಿ
ಸೊತ್ತುಗಳನ್ನು ಹೊರಗೆ ಎಸೆದು, ಹರಿಶ್ಚಂದ್ರ, ಅವರ ಪತ್ನಿ ಹಾಗೂ ಕೆಲಸಗಾರರಿಗೆ ಅವಾಚ್ಯ ಶಬ್ದಗಳಿಂದ
ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹರಿಶ್ಚಂದ್ರ ಅವರ ಪತ್ನಿ ದೂರು ನೀಡಿದ್ದಾರೆ.

ಈ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡೂ ಪ್ರಕರಣಗಳ ಕುರಿತು ಪೊಲೀಸರು
ತನಿಖೆ ನಡೆಸುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

Advertisement
