ವಿವೇಕಾನಂದ ಕಾಲೇಜಿನಲ್ಲಿ ಯುವ ಮತದಾರರ ವಿಶೇಷ ಜಾಗೃತಿ ಅಭಿಯಾನ
ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಮತದಾರರ ಸಾಕ್ಷರತಾ ಸಂಘ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಎನ್‌ಸಿಸಿ ಹಾಗೂ ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಯುವ ಮತದಾರರ ವಿಶೇಷ ನೋಂದಣಿ ಅಭಿಯಾನ ಸೋಮವಾರ ನಡೆಯಿತು.
Sponsoredಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ತಾಲೂಕು ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಶ್ರೀ ನವೀನ್ ಕುಮಾರ್ ಭಂಡಾರಿ ಮತದಾನದ ಮಹತ್ವವನ್ನು ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್. ಎಸ್. ಅಧ್ಯಕ್ಷೀಯ ನುಡಿಗಳನ್ನಾಡಿದರು. ಸಭಾ ಕಾರ್ಯಕ್ರಮದ ಬಳಿಕ ಮತದಾರರ ನೋಂದಣಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮತದಾರರ ಸಾಕ್ಷರತಾ ಸಂಘದ ಸಂಯೋಜಕಿ ಹಾಗೂ ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕಿ ದೀಪಿಕಾ ಎಸ್ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಮೋದ್ ಎಂ. ಜಿ. ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ವಂದಿಸಿ, ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿಯರಾದ ಧನ್ಯಶ್ರೀ ಹಾಗೂ ಶಿವಾನಿ ಕಾರ್ಯಕ್ರಮ ನಿರೂಪಿಸಿದರು.




