ಭಾನುವಾರ, 25 ಅಕ್ಟೋಬರ್ 2026
Trending

KHB ಅಧ್ಯಕ್ಷರಾಗಿ ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ನೇಮಕ: ಡಿಕೆಶಿ ಆದೇಶ

ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರ ಮಹತ್ವದ ಜವಾಬ್ದಾರಿ ನೀಡಿದೆ. ಅವರನ್ನು ಕರ್ನಾಟಕ ಗೃಹ ಮಂಡಳಿ (KHB) ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

Sponsored


ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಅಧಿಕೃತ ಟಿಪ್ಪಣಿ ರವಾನಿಸಲಾಗಿದ್ದು, ಶ್ರೀನಿವಾಸ್ ಮಾನೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ KHB ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸುವಂತೆ ಸೂಚಿಸಲಾಗಿದೆ.

ನಿಕೋಟಿನ್‌ ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮ – ಖಾದರ್

ಶ್ರೀನಿವಾಸ್ ಮಾನೆ ಅವರು ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದು, ಇದೀಗ ಅವರಿಗೆ ನಿಗಮ-ಮಂಡಳಿಯ ಪ್ರಮುಖ ಹುದ್ದೆ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರಾಗಿ ವಸತಿ ಯೋಜನೆಗಳು ಹಾಗೂ ಮಂಡಳಿಯ ವಿವಿಧ ಚಟುವಟಿಕೆಗಳ ಮೇಲ್ವಿಚಾರಣೆಯ ಜವಾಬ್ದಾರಿ ಅವರ ಹೆಗಲೇರಲಿದೆ.
ಸರ್ಕಾರದ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶೀಘ್ರದಲ್ಲೇ ಈ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಆದೇಶವನ್ನು ಹೊರಡಿಸುವ ನಿರೀಕ್ಷೆಯಿದೆ.

ನಿಕೋಟಿನ್‌ ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮ – ಖಾದರ್