Home Education SSLC ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ!

SSLC ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ!

Hindu neighbor gifts plot of land

Hindu neighbour gifts land to Muslim journalist

2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶವನ್ನು ಹೊರಡಿಸಿದೆ.

ಕೋವಿಡ್ ಹಿನ್ನೆಲೆಯಲ್ಲಿ 2020-21 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ದಿನಾಂಕ 01-01-2021 ರಿಂದ ಪ್ರಾರಂಭವಾಗಿದ್ದರೂ ಸಹ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದನ್ನು ಕಡ್ಡಾಯಗೊಳಿಸಿರಲಿಲ್ಲ. ಈ ಸಂಬಂಧ ಸರ್ಕಾರದ ಆದೇಶ ಸಂಖ್ಯೆ ಇಪಿ 24 ಎಸ್ಎಲ್ ಬಿ 2021 ದಿನಾಂಕ 01-02-2021 ರಿಂದ ರಾಜ್ಯದಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿತ್ತು. ಈ ವರ್ಷ ಎಸ್ ಎಸ್ಎಲ್ ಸಿ ಪರೀಕ್ಷೆಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಲಾಗಿದೆ.