Home News Stadium tragedy: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ : ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶವಿತ್ತ...

Stadium tragedy: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ : ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶವಿತ್ತ ಸಿಎಂ

Hindu neighbor gifts plot of land

Hindu neighbour gifts land to Muslim journalist

Stadium tragedy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 13 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಇದರಲ್ಲಿ 33ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೆಟ್ ಅಸೋಸಿಯೇಷನ್‌ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜನಸಂದಣಿ ಹೆಚ್ಚಾಗಿ ಜನರು ಕಾಲ್ತುಳಿತಕ್ಕೆ ಸಿಲುಕಿ 13 ಮಂದಿ ಸಾವನ್ನಪ್ಪಿದ್ದಾರೆ. ಈಗಾಗಲೇ ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ, ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ ಎಂದ ಸಿಎಂ ಈ ರೀತಿಯ ನಡೆಯಬಾರದಾಗಿತ್ತು. ಸರ್ಕಾರವು ಈ ಬಗ್ಗೆ ಸಂತಾಪ ಸೂಚಿಸುತ್ತದೆ ಎಂದು ಸಿಎಂ ಹೇಳಿದರು.

ಇನ್ನು ನಮ್ಮ ನಿರೀಕ್ಷೆಗೂ ಮೀರಿ ಜನರು, ಅಭಿಮಾನಿಗಳು ಸೇರಿದ್ದ ಕಾರಣ ಅವರ ನಿಯಂತ್ರ ಮಾಡಲು ಕಷ್ಟುವಾಯ್ತು. ಹೀಗಾಗಿ ಈ ದುರ್ಘಟನೆ ನಡೆದಿದೆ. ಚಿನ್ನಸ್ವಾಮಿ ಸ್ಟೇಡಿಯಂ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದ ವತಿಯಿಂದ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಘೋಷಿಸಿದ ಸಿಎಂ, ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.