Home News Puttur: ಪುತ್ತೂರಿನಲ್ಲಿ ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು

Puttur: ಪುತ್ತೂರಿನಲ್ಲಿ ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು

Hindu neighbor gifts plot of land

Hindu neighbour gifts land to Muslim journalist

Puttur: ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು (Puttur) ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೀಪಾವಳಿ ಹಿನ್ನೆಲೆ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಕಾರ್ಯಕ್ರಮ ಇದಾಗಿತ್ತು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಆದರೆ ಕ್ರೀಡಾಂಗಣದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾಗಿದ್ದ ಹಿನ್ನೆಲೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಕೆಲವರಿಗೆ ಉಸಿರಾಟದಲ್ಲಿ ಸಮಸ್ಯೆ ಉಂಟಾಗಿದ್ದು, ಅಸ್ವಸ್ಥರಾಗಿದ್ದಾರೆ. ಪುಟ್ಟ ಪುಟ್ಟ ಮಕ್ಕಳನ್ನು ಕಂಕುಳಲ್ಲಿ ಹೊತ್ತುಬಂದಿದ್ದ ಕೆಲವರು ನೀರು ಸಿಗದೇ ಪರದಾಡಿದ್ದಾರೆ. ಇದರಿಂದ ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದೆ. ಸದ್ಯ ಅಸ್ವಸ್ಥರನ್ನ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.