# ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಮತ್ತೊಂದು ನಿರ್ಭಯಾ ರೀತಿಯ ಪ್ರಕರಣ | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಆತನ ಎದುರಲ್ಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

- Link: https://hosakannada.com/news/state-and-nirbhaya-case/
- Published: 2021-08-25T15:55:26+00:00
- Author: ಹೊಸಕನ್ನಡ ನ್ಯೂಸ್

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು,
ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ.

Sponsored

![](https://hosakannada.com/wp-content/uploads/2021/08/IMG_20210825_155209.jpg)

ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ
ಯುವತಿ, ಪ್ರಿಯತಮನ ಜೊತೆಯಲ್ಲಿ ಹೊರವಲಯಕ್ಕೆ ಬಂದಿದ್ದ ವೇಳೆ ಗ್ಯಾಂಗ್ ರೇಪ್ ನಡೆದಿದೆ.

Advertisement

Advertisement

ಹೊರ ವಲಯದಲ್ಲಿ ಮದ್ಯಪಾನ ಮಾಡುತ್ತಿದ್ದ 6 ಮಂದಿ, ಈ ಜೋಡಿಯನ್ನು ಕಂಡು ಮೊದಲು ಪ್ರಿಯಕರನ ಮೇಲೆ ಕಲ್ಲಿನಿಂದ
ಹಲ್ಲೆ ಮಾಡಿದೆ. ನಂತರ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿದೆ ಎಂದು ತಿಳಿದುಬಂದಿದೆ.

![](https://hosakannada.com/wp-content/uploads/2021/08/IMG_20210825_155229.jpg)

ಯುವತಿ ಹಾಗೂ ಆಕೆಯ ಪ್ರಿಯಕರ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ
ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ. ಈ ಘಟನೆ ಸಂಬಂಧ ಈಗಾಗಲೇ 4-5 ಮಂದಿಯ ಮೇಲೆ ಎಫ್ ಐಆರ್
ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Advertisement
